ಸಾಂಪ್ರದಾಯಿಕ ಉದ್ಯೋಗಗಳ ಜತೆಗೆ ಹೊಸ ಉದ್ಯೋಗಗಳತ್ತ ಗಮನ ಹರಿಸುವುದು ಇಂದಿನ ಅನಿವಾರ್ಯ. ಹೊಸ ಉದ್ಯೋಗಗಳು ತಕ್ಷಣಕ್ಕೆ ತಾಂತ್ರಿಕ ಹುದ್ದೆಗಳೆನಿಸಿದರೂ, ಇವು ಎಲ್ಲ ಹಿನ್ನೆಲೆಯವರನ್ನು ಸ್ವಾಗತಿಸುವ ಕ್ಷೇತ್ರಗಳೆಂಬುದು ವಾಸ್ತವ ಸಂಗತಿ.

ನಮ್ಮ ಶಿಕ್ಷಣ ವ್ಯವಸ್ಥೆ ಹಾಗೂ ಉದ್ಯೋಗರಂಗದ ನಡುವೆ ಅಡ್ಡ ನಿಂತಿರುವ ದೊಡ್ಡ ಗೋಡೆ ಕೌಶಲಗಳ ಕೊರತೆ. ಶಿಕ್ಷಣ ಸಂಸ್ಥೆಗಳಿಂದ ಲಕ್ಷಾಂತರ ಪದವೀಧರರು ಪ್ರತಿವರ್ಷ ಹೊರಬರುತ್ತಲೇ ಇದ್ದರೂ ಉದ್ಯೋಗ ಜಗತ್ತಿನ ಅವಶ್ಯಕತೆಗಳು ಪೂರೈಕೆಯಾಗುತ್ತಿಲ್ಲ. ಒಂದೆಡೆ ಖಾಲಿ ಉಳಿದಿರುವ ಅಸಂಖ್ಯ ಉದ್ಯೋಗಗಳು, ಇನ್ನೊಂದೆಡೆ ಹೆಚ್ಚುತ್ತಲೇ ಇರುವ ನಿರುದ್ಯೋಗ. ಈ ವೈರುಧ್ಯವನ್ನು ಸರಿಪಡಿಸುವ ಏಕೈಕ ದಾರಿಯೆಂದರೆ ಶಿಕ್ಷಣ ಹಾಗೂ ಉದ್ಯೋಗ ಜಗತ್ತಿನ ನಡುವಿನ ಅಂತರವನ್ನು ನಿವಾರಿಸುವುದು; ಅಂದರೆ ನಮ್ಮ ಯುವ ಸಮೂಹವನ್ನು ಹೊಸಕಾಲದ ಕೌಶಲಗಳೊಂದಿಗೆ ಸಶಕ್ತರೂ ಸಮರ್ಥರನ್ನಾಗಿ ಬೆಳೆಸುವುದು.

ಈಗ ಕಾಲ ಬದಲಾಗಿದೆ, ಉದ್ಯೋಗಗಳೂ ಬದಲಾಗಿವೆ, ಅದಕ್ಕೆ ತಕ್ಕಂತೆ ಶಿಕ್ಷಣ ಹಾಗೂ ತರಬೇತಿ ಬದಲಾಗದೆ ಇರುವುದೇ ಇಂದಿನ ಎಲ್ಲ ಸಮಸ್ಯೆಗಳ ಮೂಲ.

ಉದ್ಯೋಗ ಜಗತ್ತು ಡೇಟಾ ಸೈನ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಸೈಬರ್ ಸೆಕ್ಯುರಿಟಿ, ವರ್ಚುವಲ್ ರಿಯಾಲಿಟಿ, 3-ಡಿ ಪ್ರಿಂಟಿಂಗ್, ರೊಬೊಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಮುಂತಾದ ಕ್ಷೇತ್ರಗಳೆಡೆಗೆ ಭರದಿಂದ ವ್ಯಾಪಿಸುತ್ತಿದೆ. ನಾವು ಕೇವಲ ಸಾಂಪ್ರದಾಯಿಕ ಉದ್ಯೋಗಗಳ ಕಡೆಗಷ್ಟೇ ಗಮನಹರಿಸಿದರೆ ಏನೇನೂ ಸಾಲದು. ಹೊಸತನದತ್ತ ತೆರೆದು ಕೊಳ್ಳುವುದು ಇಂದಿನ ಅನಿವಾರ್ಯ. ಹೊಸ ಉದ್ಯೋಗ ಸಾಧ್ಯತೆಗಳನ್ನು ಗಮನಿಸಿದಾಗ ತಕ್ಷಣಕ್ಕೆ ಇವೆಲ್ಲ ತಾಂತ್ರಿಕ ಹುದ್ದೆಗಳು ಎನಿಸಿದರೂ, ಇವು ಎಲ್ಲ ಹಿನ್ನೆಲೆಯ ಮಂದಿಯನ್ನೂ ಸ್ವಾಗತಿಸುವ ಕ್ಷೇತ್ರಗಳೆಂಬುದು ವಾಸ್ತವ ಸಂಗತಿ.

ಬಿ.ಎ, ಬಿ.ಕಾಂ, ಬಿ.ಎಸ್ಸಿಯಂತಹ ಸಾಂಪ್ರದಾಯಿಕ ಪದವಿಗಳನ್ನು ಪಡೆದವರೂ ಇವುಗಳನ್ನು ಪ್ರವೇಶಿಸಿ ಯಶಸ್ಸು ಸಾಧಿಸಬಹುದು. ದೊಡ್ಡದೊಡ್ಡ ಕಂಪನಿಗಳು ಇಂದು ಎದುರು ನೋಡುತ್ತಿರುವುದು ಕೌಶಲಗಳನ್ನೇ ಹೊರತು ಅಂಕಪಟ್ಟಿಗಳನ್ನಲ್ಲ. ಪದವಿ ವ್ಯಾಸಂಗ ಮಾಡುತ್ತಿರುವವರು ಅದರ ಜೊತೆಜೊತೆಗೆ ಕಲಿಯಬಹುದಾದ ನೂರಾರು ಕೋರ್ಸು ಗಳು ಈಗ ಲಭ್ಯವಿವೆ. ಇವುಗಳಲ್ಲಿ ಅನೇಕವು ಉಚಿತ ಹಾಗೂ ಆನ್ಲೈನ್ ವಿಧಾನದಲ್ಲಿ ಲಭ್ಯ. ಬಿಡುವಿನ ವೇಳೆಯಲ್ಲಿ ಒಂದೆರಡು ಕೋರ್ಸುಗಳನ್ನು ಮಾಡಿಕೊಂಡರೆ ಇವುಗಳ ನೆರವಿನಿಂದಲೇ ಒಳ್ಳೆಯ ಉದ್ಯೋಗ ಗಳನ್ನೂ ಪಡೆಯಬಹುದು. ಅಂಥ ಕೆಲವು ಕೋರ್ಸ್ಗಳ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ;

ಡಿಜಿಟಲ್ ಮಾರ್ಕೆಟಿಂಗ್: ಯಾವುದೇ ಉತ್ಪನ್ನದ ಮಾರಾಟಗಾರರೂ ಇಂದು ಪ್ರಚಾರಕ್ಕಾಗಿ ಅವಲಂಬಿಸಿರುವುದು ಡಿಜಿಟಲ್ ಮಾಧ್ಯಮವನ್ನು. ಸಾಂಪ್ರದಾಯಿಕ ಮಾಧ್ಯಮಗಳ ಜಾಹೀರಾತು ಸಾಕಾಗುವುದಿಲ್ಲ.

ಕಂಟೆಂಟ್ ಡೆವಲಪ್ಮೆಂಟ್, ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್, ಸರ್ಚ್ ಎಂಜಿನ್ ಆಪ್ಟಿಮೈಸೇಶನ್(ಎಸ್ಇಒ)- ಹೀಗೆ ಡಿಜಿಟಲ್ ಮಾರ್ಕೆಟಿಂಗ್ಗೆ ಸಂಬಂಧಿಸಿದಂತೆ ಹತ್ತಾರು ಆನ್ಲೈನ್ ಕೋರ್ಸುಗಳಿವೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್: ಬಹುತೇಕ ಆನ್ಲೈನ್ ಚಟುವಟಿಕೆಗಳು ಇಂದು ಕೃತಕ ಬುದ್ಧಿಮತ್ತೆ ಆಧರಿತವಾಗಿವೆ. ಅದನ್ನು ಬಳಸಿಕೊಂಡು ವ್ಯವಹಾರ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಹತ್ತಾರು ಉಚಿತ ಕೋರ್ಸ್ಗಳು ಲಭ್ಯವಿವೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಪ್ರಾಜೆಕ್ಟ್ಸ್ ಇಂಟ್ರೊಡಕ್ಷನ್ ಟು ಎಐ, ಸೆಕ್ಯೂರ್ ಆ್ಯಂಡ್ ಪ್ರೈ. ಎಐ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಫಾರ್ ರೊಬೊಟಿಕ್ಸ್, ಡೆವಲಪಿಂಗ್ ಎಐ ಅಪ್ಲಿಕೇಶನ್ಸ್ – ಈ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲವು ಕೋರ್ಸ್ಗಳು.

ಡೇಟಾ ಅನಲಿಟಿಕ್ಸ್: ತಂತ್ರಜ್ಞಾನ ಬೆಳೆದಂತೆ ವಿವಿಧ ರಂಗಗಳಿಗೆ ಸಂಬಂಧಿಸಿದ ದತ್ತಾಂಶ ಬೆಟ್ಟದಂತೆ ಬೆಳೆಯುತ್ತಿದೆ. ಇದರ ವಿಶ್ಲೇಷಣೆ ಮತ್ತು ಅನ್ವಯ ದುಸ್ತರವಾಗುತ್ತಿದೆ. ಹೀಗಾಗಿ ಡೇಟಾ ಅನಲಿಟಿಕ್ಸ್ ಎಂಬ ಪ್ರಧಾನ ಉದ್ಯೋಗ ಕ್ಷೇತ್ರವೊಂದು ತೆರೆದುಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಕಂಪ್ಯೂಟಿಂಗ್ ಫಾರ್ ಡೇಟಾ ಅನಾಲಿಸಿಸ್, ಕ್ರಿಪ್ಟೋಗ್ರಫಿ ಆ್ಯಂಡ್ ನೆಟ್ವರ್ಕ್ ಸೆಕ್ಯುರಿಟಿ, ಡೇಟಾ ಅನಲಿಟಿಕ್ಸ್ ವಿತ್ ಪೈಥಾನ್. ಡೇಟಾ ಅನಾಲಿಸಿಸ್ ಫಾರ್ ಡಿಸಿಶನ್ ಮೇಕಿಂಗ್, ವಿಶುವಲೈಸೇಶನ್ ಫಾರ್ ಡೇಟಾ ಜರ್ನಲಿಸಂ- ಇಂತಹ ಹತ್ತಾರು ಕೋರ್ಸ್ಗಳಿವೆ.

ಸೈಬರ್ ಸೆಕ್ಯುರಿಟಿ: ಆನ್ಲೈನ್ ಜಗತ್ತಿನ ಕಳ್ಳಕಾಕರಿಂದ ಸುರಕ್ಷಿತವಾಗಿರುವುದು ಇಂದಿನ ಆದ್ಯತೆಗಳಲ್ಲೊಂದು. ಹೀಗಾಗಿ ಸೈಬರ್ ಭದ್ರತೆಯ ಜ್ಞಾನ ಹಾಗೂ ಕೌಶಲಗಳನ್ನು ಬೆಳೆಸಿಕೊಂಡವರಿಗೆ ಸಾಕಷ್ಟು ಉದ್ಯೋಗಾವಕಾಶಗಳು ದೊರೆಯುತ್ತವೆ. ಸರ್ಟಿಫಿಕೇಟ್ ಇನ್ ಸೈಬರ್ ಸೆಕ್ಯುರಿಟಿ, ಇನ್ಫಾರ್ಮೇಶನ್ ಸೆಕ್ಯುರಿಟಿ ಆ್ಯಂಡ್ ಸೈಬರ್ ಫೊರೆನ್ಸಿಕ್ಸ್, ಆನ್ಲೈನ್ ಪ್ರೈವೈಸಿ, ಸೈಬರ್ ಸೆಕ್ಯುರಿಟಿ ಇನ್ ಹೆಲ್ತ್ಕೇರ್ ಪ್ರೋಗ್ರಾಮ್ಸ್- ಈ ಕ್ಷೇತ್ರದಲ್ಲಿ ಲಭ್ಯವಿರುವ ಕೆಲವು ಕೋರ್ಸುಗಳು.

ಡೇಟಾ ಸೈನ್ಸ್: ದತ್ತಾಂಶ ನಿರ್ವಹಣೆ ಕುರಿತ ಆನ್ಲೈನ್ ಕೋರ್ಸ್ಗಳನ್ನು ಇಂದು ಅಂತರರಾಷ್ಟ್ರೀಯ ಮಟ್ಟದ ಕಂಪೆನಿಗಳು ಹಾಗೂ ವಿಶ್ವವಿದ್ಯಾಲಯಗಳು ನೀಡುತ್ತಿವೆ. ಇವು ಉಚಿತವಾಗಿಯೂ ಲಭ್ಯವಿವೆ. ಪರ್ಡ್ಯು ಯೂನಿವರ್ಸಿಟಿಯ ಡೇಟಾ ಸೈನ್ಸ್ ಫಾರ್ ಸ್ಮಾರ್ಟ್ ಸಿಟೀಸ್, ಎಂಐಟಿ ಕೇಂಬ್ರಿಜ್ನ ಕೊಲಾಬೊರೇಟಿವ್ ಡೇಟಾ ಸೈನ್ಸ್ ಫಾರ್ ಹೆಲ್ತ್ಕೇರ್, ಐಬಿಎಂನ ಡೇಟಾ ಸೈನ್ಸ್ ಟೂಲ್ಸ್, ಯೂನಿವರ್ಸಿಟಿ ಆಫ್ ಲಂಡನ್ನ ಫೌಂಡೇಶನ್ಸ್ ಆಫ್ ಡೇಟಾ ಸೈನ್ಸ್ ಇಂತಹ ಉಪಯುಕ್ತ ಕೋರ್ಸ್ಗಳಿಗೆ ಉದಾಹರಣೆಗಳು.

ಗ್ರಾಫಿಕ್ ಡಿಸೈನಿಂಗ್: ಯೋಚನೆ-ಯೋಜನೆಗಳ ದೃಶ್ಶಿಕ ವಿವರಣೆ ಹೊಸಕಾಲದ ಅವಶ್ಯಕತೆಗಳಲ್ಲೊಂದು. ಹೀಗಾಗಿ ಎಲ್ಲೆಡೆಯೂ ಗ್ರಾಫಿಕ್ ವಿನ್ಯಾಸಕಾರರು ಇಂದು ಬೇಕೇಬೇಕು. ಜಾಹೀರಾತಿನಿಂದ ತೊಡಗಿ ಸಿನಿಮಾರಂಗದವರೆಗೆ ನೂರಾರು ಕ್ಷೇತ್ರಗಳು ಅವರನ್ನು ಸ್ವಾಗತಿಸುತ್ತವೆ. ಇಂಟ್ರಡಕ್ಷನ್ ಟು ಗ್ರಾಫಿಕ್ ಡಿಸೈನ್ ವಿತ್ ಫೋಟೊಶಾಪ್, ಫಂಡಮೆಂಟಲ್ಸ್ ಆಫ್ ಗ್ರಾಫಿಕ್ ಡಿಸೈನ್, ಗ್ರಾಫಿಕ್ಸ್ ಆ್ಯಂಡ್ ಅನಿಮೇಶನ್ ಡೆವಲಪ್ಮೆಂಟ್, ಕಂಪ್ಯೂಟರ್ ಗ್ರಾಫಿಕ್ಸ್- ಹೀಗೆ ಅನೇಕ ಕೋರ್ಸ್ಗಳು ಉಚಿತವಾಗಿ ದೊರೆಯುತ್ತವೆ.

ಫೋಟೊಗ್ರಫಿ ಆ್ಯಂಡ್ ವಿಡಿಯೊಗ್ರಫಿ: ಕೌಟುಂಬಿಕ ಕಾರ್ಯಕ್ರಮಗಳಿಂದ ತೊಡಗಿ ಕಾರ್ಪೊರೇಟ್ಸ್ ಸಮಾರಂಭಗಳವರೆಗೆ ಎಲ್ಲರಿಗೂ ಬೇಕಾಗಿರುವುದು ಛಾಯಾಗ್ರಹಣ ಮತ್ತು ವಿಡಿಯೊಗ್ರಫಿ. ಹೀಗಾಗಿ ಕ್ಯಾಮೆರಾ ನಿರ್ವಹಿಸಬಲ್ಲವರಿಗೆ ಈಗ ಎಲ್ಲೆಡೆಯೂ ಬೇಡಿಕೆ. ಫೋಟೊಗ್ರಫಿ, ವಿಡಿಯೊಗ್ರಫಿ ಬಲ್ಲವರು ನಿರುದ್ಯೋಗಿಗಳಾಗುವ ಸಾಧ್ಯತೆ ಕಡಿಮೆ. ಹತ್ತಾರು ಸಂಖ್ಯೆಯಲ್ಲಿ ಲಭ್ಯವಿರುವ ಉಚಿತ ಆನ್ಲೈನ್ ಕೋರ್ಸ್ಗಳ ಮೂಲಕ ಫೋಟೊಗ್ರಫಿ ಕೌಶಲಗಳನ್ನು ಸುಲಭವಾಗಿ ಬೆಳೆಸಿಕೊಳ್ಳಬಹುದು.

ವೆಬ್ ಡಿಸೈನಿಂಗ್: ತಾಂತ್ರಿಕ ಪದವಿಗಳ ವ್ಯಾಸಂಗ ಮಾಡದೆಯೂ ಜಾಲತಾಣಗಳನ್ನು ಹಾಗೂ ಆ್ಯಪ್ಗಳನ್ನು ಅಭಿವೃದ್ಧಿಪಡಿಸುವುದು ಈಗಿನ ಪ್ರವೃತ್ತಿಗಳಲ್ಲೊಂದು. ಅನೇಕ ಯುವಕರು ಇದನ್ನೊಂದು ಹವ್ಯಾಸವನ್ನಾಗಿ ಬೆಳೆಸಿಕೊಂಡು ದೊಡ್ಡ ಯಶಸ್ಸು ಸಾಧಿಸಿರುವುದುಂಟು. ಇಂಟ್ರಡಕ್ಷನ್ ಟು ವೆಬ್ ಡೆವಲಪ್ಮೆಂಟ್, ಯುಎಕ್ಸ್ ಡಿಸೈನ್ ಫಾರ್ ಮೊಬೈಲ್ ಡೆವಲಪರ್ಸ್, ಯೂಸರ್ ಇಂಟರ್ಫೇಸ್ ಡಿಸೈನ್. ಯೂಸರ್ ಎಕ್ಸ್ಪೀರಿಯನ್ಸ್ ಡಿಸೈನ್- ಈ ವರ್ಗಕ್ಕೆ ಸಂಬಂಧಿಸಿದ ಕೆಲವು ಕೋರ್ಸ್ಗಳು.

‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ– 2020’ (ಎನ್ಇಪಿ), ಪದವಿ ಹಾಗೂ ಉದ್ಯೋಗಗಳ ನಡುವಿನ ಅಂತರವನ್ನು ಮೌಲ್ಯ ಹಾಗೂ ಕೌಶಲಗಳ ಚೌಕಟ್ಟಿನಲ್ಲಿ ನಿವಾರಿಸಿಕೊಳ್ಳುವ ದೊಡ್ಡ ಕನಸು ಇಟ್ಟುಕೊಂಡಿದೆ. ಇದರ ಸಮರ್ಥ ಅನುಷ್ಠಾನ ವಿದ್ಯಾರ್ಥಿಗಳ ಉತ್ಸಾಹ ಹಾಗೂ ಅಧ್ಯಾಪಕರ ಬದ್ಧತೆಯ ಮೇಲೆ ನಿಂತಿದೆ. ಕೌಶಲಾಭಿವೃದ್ಧಿ ಕೋರ್ಸ್ಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಇದಕ್ಕಿರುವ ಸರಳ ಮಾರ್ಗ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.