ಬೆಂಗಳೂರು: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್ಇ) 12ನೇ ತರಗತಿ ವಿದ್ಯಾರ್ಥಿಗಳಿಗೆ ದಯಾನಂದ ಸಾಗರ್ ವಿಶ್ವವಿದ್ಯಾಲಯವು ಯಶಸ್ವಿಯಾಗಿ ಪರೀಕ್ಷೆ ಎದುರಿಸುವ ಬಗ್ಗೆ ಫೆ.2ರಿಂದ ಫೆ.9ರವರೆಗೆ ‘ಮೈಂಡ್ ಸ್ಪಾರ್ಕ್ ಸೀರೀಸ್’ ಶೀರ್ಷಿಕೆಯಡಿ ಕಾರ್ಯಾಗಾರ ಹಮ್ಮಿಕೊಂಡಿದೆ.

ಎಂಟು ದಿನಗಳ ಈ ಕಾರ್ಯಾಗಾರದಲ್ಲಿ ಉಚಿತ ಪ್ರವೇಶ ಇರಲಿದೆ. ಮಂಡಳಿಯ ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳನ್ನು ವಿಷಯ ತಜ್ಞರು ತಿಳಿಸಿಕೊಡಲಿದ್ದಾರೆ. ಸಿಬಿಎಸ್ಇ ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯವು ಸತತವಾಗಿ ರಾಜ್ಯದ ಅಗ್ರ ಮೂರು ವಿಶ್ವ ವಿದ್ಯಾಲಯಗಳಲ್ಲಿ ಸ್ಥಾನ ಪಡೆಯುತ್ತಿದೆ. ಉತ್ತಮವಾಗಿ ಅಂಕ ಪಡೆಯಲು ಕಾರ್ಯಾ
ಗಾರದಲ್ಲಿ ವಿಷಯ ತಜ್ಞರು ಸಲಹೆ ಸೂಚನೆಗಳನ್ನೂ ನೀಡಲಿದ್ದಾರೆ.

ಪ್ರತಿನಿತ್ಯ ನಾಲ್ಕು ಗಂಟೆಗಳ ಕಾಲ ಈ ಕಾರ್ಯಾಗಾರ ನಡೆಯಲಿದೆ. ವಿದ್ಯಾರ್ಥಿಗಳು https://dsuedu.in/CBSE-STUDENT ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಶಾಲೆಗಳು https://dsuedu.in/CBSE-COLLEGE ಮೂಲಕ ನೋಂದಾಯಿಸಿ, ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.