ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ 2023ನೇ ಸಾಲಿನಲ್ಲಿ 644ನೇ ರ‍್ಯಾಂಕ್ ಪಡೆದಿರುವ ಬಳ್ಳಾರಿಯ ಶಾಂತಪ್ಪ ಕುರುಬರ (ಜಡೆಮ್ಮನವರ) ಉತ್ತಮ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ. ಗ್ರಾಮೀಣ ಪ್ರದೇಶದ, ಸರ್ಕಾರಿ ಶಾಲೆಗಳಲ್ಲಿ ಓದಿದ ಶಾಂತಪ್ಪ ಬಡತನದಲ್ಲಿಯೇ ಬೆಳೆದು ಬಂದವರು. ಬೆಂಗಳೂರಿನಲ್ಲಿ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿರುವ ಅವರು, ಹಲವು ಸಮಾಜಮುಖಿ ಕೆಲಸ ಕಾರ್ಯಗಳಿಂದಲೂ ಪರಿಚಿತರಾಗಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದರೂ, ಛಲ ಬಿಡದೆ ಓದಿ, ತಾಳ್ಮೆಯಿಂದ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ ಶಾಂತಪ್ಪ. ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿನ ಅವರ ಅನುಭವ ಮತ್ತು ಈಗ ಪರೀಕ್ಷಾ ಸಿದ್ಧತೆಯಲ್ಲಿರುವವರಿಗೆ ಅಮೂಲ್ಯ ಸಲಹೆಗಳನ್ನು ಈ ವಿಡಿಯೊದಲ್ಲಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.