ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತುರುಸಿನ ಹಣಾಹಣಿ ಏರ್ಪಟ್ಟಿದೆ. ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದಿಂದ ಕಣಕ್ಕಿಳಿದಿದ್ದಾರೆ. ಪಿಡಿಪಿಯಿಂದ ಮಾಜಿ ರಾಜ್ಯಸಭಾ ಸದಸ್ಯ ಮೊಹಮ್ಮದ್ ಫಯಾಜ್ ಮೀರ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್‌ನಿಂದ ಸಜ್ಜಾದ್ ಗನಿ ಲೋನ್ ಅಖಾಡಕ್ಕಿಳಿದಿದ್ದು, ತ್ರಿಕೋನ ಹೋರಾಟ ನಿರೀಕ್ಷಿಸಲಾಗಿದೆ. 2019ರಲ್ಲಿ ಈ ಕ್ಷೇತ್ರದಿಂದ ನ್ಯಾಷನಲ್ ಕಾನ್ಫರೆನ್ಸ್‌ನ ಮೊಹಮ್ಮದ್ ಅಕ್ಬರ್ ಲೋನ್ ಅವರು ಆಯ್ಕೆಯಾಗಿದ್ದರು. ಬಿಜೆಪಿಯು ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಸಜ್ಜಾದ್ ಲೋನ್ ಅವರು ಬಿಜೆಪಿ ಬೆಂಬಲದೊಂದಿಗೆ ಕಣಕ್ಕಿಳಿದಿದ್ದಾರೆ ಎಂದು ಒಮರ್ ಆರೋಪಿಸಿದ್ದಾರೆ. ‘ತಾವು ಸಂಸತ್‌ಗೆ ಆಯ್ಕೆಯಾದರೆ ಬಿಜೆಪಿ ಜತೆ ಸೇರುವುದಿಲ್ಲ ಎಂದು ಬಹಿರಂಗವಾಗಿ ಮಾತುಕೊಡಬೇಕು’ ಎಂದು ಲೋನ್ ಅವರಿಗೆ ಈಚೆಗೆ ಸವಾಲು ಹಾಕಿದ್ದರು. ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೆ ಕೆಲವು ಕಡೆ ರ್‍ಯಾಲಿ ನಡೆಸಲು ಜಮ್ಮು ಮತ್ತು ಕಾಶ್ಮೀರದ ಆಡಳಿತ ಅವಕಾಶ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಒಮರ್ ಅವರು ಚುನಾವಣಾಧಿಕಾರಿಗೆ ಪತ್ರ ಬರೆದಿದ್ದರು. ಆ ಬಳಿಕ ಪ್ರಚಾರ ಸಭೆಗಳನ್ನು ನಡೆಸಲು ಅನುಮತಿ ಲಭಿಸಿತ್ತು. ಈ ಕ್ಷೇತ್ರದಲ್ಲಿ ಶಿಯಾ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರ ಬೆಂಬಲ ಒಮರ್ ಅವರಿಗೆ ಲಭಿಸಬಹುದು ಎಂದು ವಿಶ್ಲೇಷಿಸಲಾಗಿದೆ. ಬಾರಾಮುಲ್ಲಾ ಕ್ಷೇತ್ರದಲ್ಲಿ
ಮೇ 20ರಂದು ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.