ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಘಟಾನುಘಟಿ ಅಭ್ಯರ್ಥಿಗಳು ಸೋತ ನಿದರ್ಶನಗಳಿವೆ. ಪ್ರಸಿದ್ಧ ಸಾಹಿತಿ ಶಿವರಾಮ ಕಾರಂತ ಹೆಸರಾಂತ ಚಿತ್ರನಟ ಉತ್ತರ ಕನ್ನಡ ಮೂಲದವರೇ ಆದ ಅನಂತ ನಾಗ್ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮಾರ್ಗರೆಟ್ ಆಳ್ವ ಶಾಸಕ ಆರ್.ವಿ.ದೇಶಪಾಂಡೆ ಸೋಲು ಅನುಭವಿಸಿದ ಘಟಾನುಘಟಿಗಳು. ಅಚ್ಚರಿಯ ಸಂಗತಿ ಎಂದರೆ ಬಿಜೆಪಿಯ ಅನಂತಕುಮಾರ್ ಹೆಗಡೆ ಹಾಗೂ ಕಾಂಗ್ರೆಸ್‍ನ ದೇವರಾಯ ನಾಯ್ಕ ನಿರಾಯಾಸವಾಗಿ ಗೆದ್ದು ಬಂದಿದ್ದಾರೆ. ಪ್ರಬಲ ಅಭ್ಯರ್ಥಿಯ ವಿರುದ್ಧ ಸೆಣಸಿ ಅವರನ್ನು ಸೋಲಿಸಿದ ಹಿರಿಮೆ ಇವರದ್ದು. 1977ರಲ್ಲಿ ಕಾಂಗ್ರೆಸ್‍ನ ಬಿ.ಪಿ.ಕದಂ ರಾಮಕೃಷ್ಣ ಹೆಗಡೆ ಅವರನ್ನು ಮಣಿಸಿದ್ದರು. 1980ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಆರ್.ವಿ.ದೇಶಪಾಂಡೆ ಅವರನ್ನು ದೇವರಾಯ ನಾಯ್ಕ ಸೋಲಿಸಿದ್ದರು. 1989ರಲ್ಲಿ ಶಿವರಾಮ ಕಾರಂತ ಅನಂತನಾಗ ಅವರಂತಹ ಘಟಾನುಘಟಿಗಳಿಗೆ ದೇವರಾಯ ನಾಯ್ಕ ಸೋಲಿನ ರುಚಿ ತೋರಿಸಿದ್ದರು.