ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖಾಮುಖಿ | ಅಮೇಠಿ: ಸ್ಮೃತಿ ಇರಾನಿ vs ಕಿಶೋರಿ ಲಾಲ್‌ ಶರ್ಮಾ

Published 4 ಮೇ 2024, 23:23 IST
Last Updated 4 ಮೇ 2024, 23:23 IST
ಅಕ್ಷರ ಗಾತ್ರ

ಸ್ಮೃತಿ ಇರಾನಿ (ಬಿಜೆಪಿ)

ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕ್ಷೇತ್ರಗಳಲ್ಲೊಂದಾದ ಅಮೇಠಿಯಿಂದ ಈ ಬಾರಿಯೂ ಬಿಜೆಪಿಯು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಕಣಕ್ಕಿಳಿಸಿದೆ. 2019ರ ಚುನಾವಣೆಯಲ್ಲಿ ಸ್ಮೃತಿ ಅವರು 55,120 ಮತಗಳ ಅಂತರದಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸೋಲಿಸಿದ್ದರು. ಕಿರುತೆರೆ ನಟಿಯಾಗಿದ್ದ ಸ್ಮೃತಿ ಅವರು 2003ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆಯಾಗಿಯೂ ಕಾರ್ಯ ನಿರ್ವಹಿಸಿದ್ದರು. 2004ರಲ್ಲಿ ದೆಹಲಿಯ ಚಾಂದಿನಿ ಚೌಕ್‌ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ಕಪಿಲ್‌ ಸಿಬಲ್‌ ವಿರುದ್ಧ ಸ್ಪರ್ಧಿಸಿ ಸೋತಿದ್ದರು. 2011ರಲ್ಲಿ ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಸಂಸತ್‌ ಪ್ರವೇಶಿಸಿದ್ದರು. ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಿಂದ 2014ರಲ್ಲಿ ಸ್ಮೃತಿ ಅವರು ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಕಿಶೋರಿ ಲಾಲ್‌ ಶರ್ಮಾ (ಕಾಂಗ್ರೆಸ್‌)

ಬಿಜೆಪಿಯ ಪ್ರಬಲ ಅಭ್ಯರ್ಥಿಯಾದ ಸ್ಮೃತಿ ಇರಾನಿ ಅವರನ್ನು ಮಣಿಸಲು ಈ ಬಾರಿ ಕಾಂಗ್ರೆಸ್‌, ಗಾಂಧಿ ಕುಟುಂಬಕ್ಕೆ ಆಪ್ತರಾಗಿರುವ ಕಿಶೋರಿ ಲಾಲ್‌ ಶರ್ಮಾ ಅವರನ್ನು ಅಖಾಡಕ್ಕಿಳಿಸಿದೆ. ಈ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರೇ ಸ್ಪರ್ಧಿಸುತ್ತಾರೆಂದು ಆರಂಭದಲ್ಲಿ ಹೇಳಲಾಗುತ್ತಿತ್ತು. ಅಮೇಠಿಯಿಂದ ರಾಹುಲ್‌ ಮತ್ತು ರಾಯ್‌ಬರೇಲಿಯಿಂದ ಸೋನಿಯಾ ಗಾಂಧಿ ಅವರು ಈ ಹಿಂದೆ ಸ್ಪರ್ಧಿಸಿದ್ದಾಗ, ಅವರ ಗೆಲುವಿಗಾಗಿ ಕಿಶೋರಿ ಲಾಲ್‌ ಅವರು ಅವಿರತವಾಗಿ ಶ್ರಮಿಸಿದ್ದರು. ಪಂಜಾಬ್‌ನ ಲುಧಿಯಾನ ಮೂಲದ ಕಿಶೋರಿ ಲಾಲ್‌ ಅವರು ಅಮೇಠಿ ಕ್ಷೇತ್ರದಲ್ಲಿ ಪ್ರಭಾವಿ ಮುಖಂಡರಾಗಿದ್ದಾರೆ. ‘ಇಂಡಿಯಾ’ ಒಕ್ಕೂಟದ ಅಭ್ಯರ್ಥಿಯಾಗಿರುವುದು ಕಿಶೋರಿ ಲಾಲ್‌ ಅವರ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ. 63 ವರ್ಷದ ಅವರು ಮೊದಲ ಬಾರಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ. ಕಿಶೋರಿ ಲಾಲ್‌ ಅವರು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT