ಕೊಚ್ಚಿ: ಕೇರಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಸುರೇಂದ್ರನ್ ವಿರುದ್ಧ ಬರೋಬ್ಬರಿ 242 ಪ್ರಕರಣಗಳಿವೆ.

ಚುನಾವಣೆಯ ಹಿನ್ನೆಲೆಯಲ್ಲಿ ಸುರೇಂದ್ರನ್ ಅವರು ತಮ್ಮ ವಿರುದ್ಧದ ಪ್ರಕರಣಗಳ ವಿವರಗಳನ್ನು ಪಕ್ಷದ ಮುಖವಾಣಿಯಲ್ಲಿ ಮೂರು ಪುಟಗಳಲ್ಲಿ ಪ್ರಕಟಿಸಿದ್ದಾರೆ.

ಇದೇ ರೀತಿ ಎರ್ನಾಕುಳಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ರಾಧಾಕೃಷ್ಣನ್ ಅವರ ವಿರುದ್ಧ 211 ಪ್ರಕರಣಗಳು ದಾಖಲಾಗಿವೆ.

‘ಹೆಚ್ಚಿನ ಪ್ರಕರಣಗಳು 2018ರಲ್ಲಿ ನಡೆದ ಶಬರಿಮಲೆ ಪ್ರತಿಭಟನೆಗಳಿಗೆ ಸಂಬಂಧಿಸಿದವು. ಬಹುತೇಕ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಪಕ್ಷವು ಮುಷ್ಕರ ಅಥವಾ ಪ್ರತಿಭಟನೆಗೆ ಕರೆ ನೀಡಿದಾಗ ಪೊಲೀಸರು ಅದಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸುತ್ತಾರೆ’ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಪಿಟಿಐಗೆ ತಿಳಿಸಿದರು.

ಸುರೇಂದ್ರನ್, ರಾಧಾಕೃಷ್ಣನ್, ಆಲಪ್ಪುಳ ಕ್ಷೇತ್ರದ ಅಭ್ಯರ್ಥಿ ಶೋಭಾ ಸುರೇಂದ್ರನ್ ಅವರ ವಿರುದ್ಧದ ಪ್ರಕರಣಗಳ ವಿವರಗಳನ್ನು ಶುಕ್ರವಾರ ‘ಎಕ್ಸ್’ ವೇದಿಕೆಯಲ್ಲಿ ಹಂಚಿಕೊಂಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ‘ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗಿರುವುದು ಕಷ್ಟ’ ಎಂದು ಉಲ್ಲೇಖಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.