ರಾಯ್‌ಬರೇಲಿ: ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಧರ್ಮದ ವಿಚಾರವನ್ನು ಎತ್ತಿ ಹಿಡಿದು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.

ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸಿ ಮತ್ತೆ ಅಧಿಕಾರಕ್ಕೆ ಬರಬಹುದು ಎಂದು ಬಿಜೆಪಿ ನಾಯಕರು ನಂಬಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿ ಪರ ಪ್ರಚಾರ ನಡೆಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಬಿಜೆಪಿಯ ನಾಯಕರೆಲ್ಲರೂ, ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

'ದೇಶದಲ್ಲಿ ಎರಡು ರೀತಿಯ ರಾಜಕಾರಣ ಮಾಡಲಾಗುತ್ತಿದೆ. ಬಿಜೆಪಿಯ ರಾಜಕೀಯ ಜನರ ಭಾವನೆಗಳೊಂದಿಗೆ ಆಟವಾಡುತ್ತಿದೆ. ಧರ್ಮದ ಹೆಸರಿನಲ್ಲಿ ಮತಯಾಚಿಸುತ್ತಾರೆ. ಮತದಾರರ ಬಗ್ಗೆ ಯಾವುದೇ ಕಾಳಜಿಯಿಲ್ಲದೆ ಅಧಿಕಾರದಲ್ಲಿ ಉಳಿಯುತ್ತಾರೆ. ಮತ್ತೊಂದೆಡೆ ಕಾಂಗ್ರೆಸ್ ನಿಜವಾದ ರಾಜಕಾರಣ ಮಾಡುತ್ತಿದ್ದು, ಜನರಿಗಾಗಿ ಕೆಲಸ ಮಾಡಲು ಸದಾ ಸಿದ್ಧವಿದೆ' ಎಂದು ಅವರು ಹೇಳಿದ್ದಾರೆ.

'ಅವರು (ಬಿಜೆಪಿ) ನಮ್ಮನ್ನು ಭ್ರಷ್ಟರೆಂದು ಕರೆಯುತ್ತಾರೆ. ಆದರೆ ಅಧಿಕಾರದಲ್ಲಿದ್ದ 55 ವರ್ಷಗಳಲ್ಲಿ ಕಾಂಗ್ರೆಸ್‌ಗೆ ಶ್ರೀಮಂತ ಪಕ್ಷವಾಗಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ ಬಿಜೆಪಿ 10 ವರ್ಷಗಳಲ್ಲೇ ವಿಶ್ವದ ಅತಿ ಶ್ರೀಮಂತ ಪಕ್ಷವಾಗಿದೆ' ಎಂದು ಹೇಳಿದ್ದಾರೆ.

ನ್ಯಾಯ ಪತ್ರದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್ ಬದ್ಧವಾಗಿದೆ. ಬಿಜೆಪಿ ಕಡೆಗಣಿಸಿರುವ ಮಹಿಳೆಯರು, ರೈತರು ಮತ್ತು ಯುವಜನತೆ ಪರ ಕೆಲಸ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಐದನೇ ಹಂತದಲ್ಲಿ ಮೇ 20ರಂದು ಮತದಾನ ನಡೆಯಲಿದೆ.
.ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ, ಮೀಸಲಾತಿ ರದ್ದು: ರಾಹುಲ್ ಗಾಂಧಿ.LS Polls: ಪ್ರಧಾನಿ ನರೇಂದ್ರ ಮೋದಿ ಆಸ್ತಿ ₹3 ಕೋಟಿ; ಪತ್ನಿ ಆಸ್ತಿ ಗೊತ್ತಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.