ನವದೆಹಲಿ: ಲೋಕಸಭೆ ಚುನಾವಣೆಗಾಗಿ ಬಿಜೆಪಿಯು ಭಾನುವಾರ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿ ಪ್ರಕಟಿಸಿದ್ದು, 111 ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಘೋಷಿಸಿದೆ.

ಕೇಂದ್ರ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಮತ್ತು ವಿ.ಕೆ.ಸಿಂಗ್ ಹಾಗೂ ಸಂಸದ ವರುಣ್ ಗಾಂಧಿ ಅವರಿಗೆ ಟಿಕೆಟ್ ಕೈತಪ್ಪಿದೆ. ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ನಟ ಅರುಣ್ ಗೋವಿಲ್ ಅವರನ್ನು ಕಣಕ್ಕಿಳಿಸಿದೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಂಬಲ್ಪುರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದರೆ, ಪಕ್ಷದ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಅವರು ಪುರಿ ಕ್ಷೇತ್ರದಿಂದ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ. ಸಂಬಿತ್ ಅವರು 2019ರಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದರು.

ಕಂಗನಾ ಅವರು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪ್ರಸಿದ್ಧ ‘ರಾಮಾಯಣ’ ಟಿ.ವಿ. ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡಿದ್ದ ಅರುಣ್ ಗೋವಿಲ್ ಅವರನ್ನು ಮೀರಠ್ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಮೇನಕಾ ಗಾಂಧಿ ಅವರು ಸುಲ್ತಾನ್ಪುರ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ. ವರುಣ್ ಗಾಂಧಿ ಪ್ರತಿನಿಧಿಸುತ್ತಿದ್ದ ಫಿಲಿಬಿತ್ ಕ್ಷೇತ್ರಕ್ಕೆ ಉತ್ತರ ಪ್ರದೇಶದ ಸಚಿವ ಜಿತಿನ್ ಪ್ರಸಾದ್ ಅವರ ಹೆಸರನ್ನು ಘೋಷಿಸಿದೆ. ಸೀತಾ ಸೊರೇನ್ ಅವರು ಜಾರ್ಖಂಡ್ನ ಧುಮ್ಕಾ ಕ್ಷೇತ್ರದಿಂದ ಸ್ಪರ್ಧಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.