ಬೋಲಂಗೀರ್ (ಒಡಿಶಾ): ಬಿಜೆಪಿಯು ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಒಡಿಶಾದ ಬೋಲಂಗೀರ್‌ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, 'ಬಿಜೆಪಿ ಈ ಬಾರಿಯ ಚುನಾವಣೆ ಗೆದ್ದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸಲಿದ್ದು, ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸಲಿದೆ' ಎಂದು ಹೇಳಿದ್ದಾರೆ.

ಸಂವಿಧಾನದ ಪುಸಕ್ತದ ಪ್ರತಿಯನ್ನು ಕೈಯಲ್ಲಿ ಹಿಡಿದು ಭಾಷಣ ಮಾಡಿದ ರಾಹುಲ್ ಗಾಂಧಿ, 'ಈ ಪುಸ್ತಕವನ್ನು ಹರಿದು ಬಿಸಾಡಲು ಬಿಜೆಪಿ ಬಯಸುತ್ತಿದೆ. ಆದರೆ ಹಾಗೇ ಆಗಲು ಕಾಂಗ್ರೆಸ್ ಹಾಗೂ ಈ ದೇಶದ ಜನತೆ ಬಿಡುವುದಿಲ್ಲ' ಎಂದು ಹೇಳಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಆದಿವಾಸಿಗಳು, ದಲಿತರು, ಹಿಂದುಳಿದ ವರ್ಗಗಳಿಗೆ ಒದಗಿಸಲಾದ ಮೀಸಲಾತಿಯನ್ನು ರದ್ದುಗೊಳಿಸಲಿದೆ. ಹಾಗಾಗಿ ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.