ಗೌಚಾರ್(ಉತ್ತರಾಖಂಡ): ಇನ್ನು ಕೆಲವೇ ವರ್ಷಗಳಲ್ಲಿ ಡೈನೋಸಾರ್ಗಳಂತೆ ಕಾಂಗ್ರೆಸ್ ಪಕ್ಷವು ನಿರ್ನಾಮವಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಉತ್ತರಾಖಂಡ್ನ ಗೌಚಾರ್ನಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಬಲೂನಿ ಅವರ ಪರವಾಗಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಒಬ್ಬರಾದ ಮೇಲೆ ಒಬ್ಬರು ಕಾಂಗ್ರೆಸ್ ನಾಯಕರು ಪಕ್ಷವನ್ನು ತೊರೆಯುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ಕೆಲವೇ ವರ್ಷಗಳಲ್ಲಿ ಡೈನೋಸಾರ್ನಂತೆ ಕಾಂಗ್ರೆಸ್ ನಶಿಸಿಹೋಗುತ್ತದೆ. ಮುಂದಿನ ವರ್ಷಗಳಲ್ಲಿ ಮಕ್ಕಳು ಕಾಂಗ್ರೆಸ್ ನಾಯಕರ ಹೆಸರು ಕೇಳಿದರೆ ಯಾರು ಎಂದು ಕೇಳುವ ಸ್ಥಿತಿ ನಿರ್ಮಾಣವಾಗಲಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಟಿವಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಕಾರ್ಯಕ್ರಮದಲ್ಲಿರುವಂತೆ ಕಾಂಗ್ರೆಸ್ ನಾಯಕರು ದಿನನಿತ್ಯ ಒಬ್ಬರಿಗೊಬ್ಬರು ಬಡಿದಾಡಿಕೊಂಡು ಪರಸ್ಪರ ಬಟ್ಟೆ ಹರಿದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.