ಚೆನ್ನೈ: ಮತಯಂತ್ರ ಇಟ್ಟಿರುವ ಭದ್ರತಾ ಕೊಠಡಿಗೆ ತಡೆರಹಿತ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಆಗ್ರಹಿಸಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ಚುನಾವಣಾ ಆಯೋಗವನ್ನು ಆಗ್ರಹಿಸಿದೆ.

ಉದಕಮಂಡಲದಲ್ಲಿ (ಊಟಿ) ಏ. 27ರಂದು ಸಂಜೆ 6.20ರಿಂದ 6.40ರವರೆಗೆ 20 ನಿಮಿಷಗಳ ಕಾಲ ಕ್ಯಾಮೆರಾ ಸ್ಥಗಿತಗೊಂಡಿತ್ತು. ಈ ಘಟನೆಯನ್ನು ಉಲ್ಲೇಖಿಸಿ ಪಕ್ಷದ ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ ಅವರು ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಮತ್ತು ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

‘ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂಗಳಿಗೆ ನಿರಂತರವಾಗಿ ಕಾರ್ಯ ನಿರ್ವಹಿಸುವಂತೆ ತಡೆ ರಹಿತ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಕೊಠಡಿಗಳ ಮೇಲೆ ಡ್ರೋನ್ಗಳು ಹಾರಾಡದಂತೆ ನಿಷೇಧಿತ ವಲಯ ಎಂದು ಘೋಷಿಸಬೇಕು. ಕೊಠಡಿಯಲ್ಲಿ ತಾಂತ್ರಿಕ, ವಿದ್ಯುತ್ ಮತ್ತು ವಿದ್ಯುನ್ಮಾನ ಸೇರಿದಂತೆ ಯಾವುದೇ ಸಮಸ್ಯೆ ಉಂಟಾಗದಂತೆ ಸಿಸಿಟಿವಿ ಕ್ಯಾಮೆರಾ ಸ್ಥಗಿತಗೊಳ್ಳದಂತೆ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

‘ನೀಲಗಿರಿ ಲೋಕಸಭಾ ಕ್ಷೇತ್ರದಲ್ಲಿ ಬಳಸಲಾದ ವಿದ್ಯುನ್ಮಾನ ಮತ ಯಂತ್ರಗಳನ್ನು ಊಟಿಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಯಲ್ಲಿ ಇಡಲಾಗಿದೆ. ಇದನ್ನು ಸುರಕ್ಷಿತವಾಗಿಡಲು ಅನಿಯಂತ್ರಿತ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದೊಂದೇ ಪರಿಹಾರ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.