ನವದೆಹಲಿ: ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರು ಜನಾದೇಶವನ್ನು (ಬಹುಮತ) ಕಳೆದುಕೊಂಡಿದ್ದು, ಸೋಲಿನ ಹೊಣೆ ಹೊತ್ತುಕೊಂಡಿಲ್ಲ’ ಎಂದು ಟೀಕಿಸಿದ್ದಾರೆ.

‘ಮೋದಿ ಅವರು ತಮ್ಮ ಪಕ್ಷ ಮತ್ತು ಮಿತ್ರಪಕ್ಷಗಳೆರಡನ್ನೂ ಹೊರಗಿಟ್ಟು ಕೇವಲ ತಮ್ಮ ಹೆಸರಿನಲ್ಲೇ ಜನಾದೇಶವನ್ನು ಕೋರಿದ್ದರು. ಆದರೆ, ಅವರು (ಮೋದಿ) ಕೆಟ್ಟ, ನೈತಿಕ ಸೋಲನ್ನು ಅನುಭವಿಸಿದ್ದಾರೆ. ವಾಸ್ತವದಲ್ಲಿ ಅವರು ಜನಾದೇಶ (ಬಹುಮತ) ಕಳೆದುಕೊಂಡಿರುವುದರಿಂದ ನಾಯಕತ್ವದ ಹಕ್ಕನ್ನು ಕಳೆದುಕೊಂಡಿದ್ದಾರೆ’ ಎಂದು ಕಿಡಿಕಾರಿದ್ದಾರೆ.

‘ಇಷ್ಟಾದರೂ ಮೋದಿಯವರು ಸೋಲಿನ ಹೊಣೆ ಹೊರದೆ, ಮತ್ತೆ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಮೋದಿಯವರು ಆಡಳಿತದ ಮೂಲತತ್ವ ಮತ್ತು ಶೈಲಿಯನ್ನು ಬದಲಾಯಿಸುತ್ತಾರೆ ಅಥವಾ ಜನರ ಇಚ್ಛೆಯಂತೆ ಆಡಳಿತ ನಡೆಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ಅವರು ಗುಡುಗಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ಇದ್ದಂತೆ ಇನ್ನು ಮುಂದೆ ಸಂಸತ್ತನ್ನು ಮೂಕವಿಸ್ಮಿತಗೊಳಿಸುವುದಿಲ್ಲ ಮತ್ತು ಉಸಿರುಗಟ್ಟಿಸಲು ನಾವು ಬಿಡುವುದಿಲ್ಲ ಎಂದಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಇಂದು (ಭಾನುವಾರ) ರಾತ್ರಿ 7.15ಕ್ಕೆ ನಡೆಯುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಮಾರಂಭದಲ್ಲಿ ವಿದೇಶಿ ಗಣ್ಯರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಾವಿರಾರು ಮಂದಿ ಅತಿಥಿಗಳು ಭಾಗವಹಿಸಲಿದ್ದಾರೆ. ಎನ್‌ಡಿಎ ಮೈತ್ರಿ ಸರ್ಕಾರದ ಸಂಪುಟಕ್ಕೆ ಸುಮಾರು 30 ಮಂದಿ ಸೇರ್ಪಡೆಯಾಗಲಿದ್ದಾರೆ. ಮೊದಲ ಹಂತದಲ್ಲಿ ಮಿತ್ರ ಪಕ್ಷಗಳ 12ರಿಂದ 15 ಸದಸ್ಯರು ಸಂಪುಟಕ್ಕೆ ಸೇರುವ ಸಂಭವ ಇದೆ.
.ಅನಾರೋಗ್ಯ ಕಾರಣ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ: ಎಚ್ಡಿಡಿ.ಲೋಕಸಭೆಯಲ್ಲಿ ಕಾಂಗ್ರೆಸ್ ಪ್ರತಿಪಕ್ಷವಾಗಿ ಉಳಿಯಲು ನಿರ್ಧರಿಸಿದೆ: ಡಿಕೆಶಿ.ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ: ಕಾಂಗ್ರೆಸ್ ಪಕ್ಷದ ಸರ್ವಾನುಮತದ ನಿರ್ಣಯ.ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮರು ಆಯ್ಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.