ಮಥುರಾ: ಮಥುರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೇಮಾ ಮಾಲಿನಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಉತ್ತರಪ್ರದೇಶಕ್ಕೆ ಭೇಟಿ ನೀಡಿದ್ದ ಹೇಮಾ ಮಾಲಿನಿ ಅವರು, ಗೋಧಿ ಗದ್ದೆಗೆ ಇಳಿದು ಸ್ಥಳೀಯ ರೈತ ಮಹಿಳೆಯರೊಂದಿಗೆ ಸಂವಾದ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡ ಅವರು, ‘ಕಳೆದ 10 ವರ್ಷಗಳಿಂದ ನಿಯಮಿತವಾಗಿ ಭೇಟಿಯಾಗುತ್ತಿದ್ದ ರೈತರೊಂದಿಗೆ ಸಂವಾದ ನಡೆಸಿದೆ. ಅವರ ಬಿಡುವಿಲ್ಲದ ಕೆಲಸದ ನಡುವೆಯೂ ನನ್ನೊಂದಿಗೆ ಮಾತನಾಡಿದರು, ಫೋಟೊ ಕ್ಲಿಕ್ಕಿಸಿಕೊಳ್ಳಬೇಕೆಂದು ಒತ್ತಾಯಿಸಿದರು’ ಎಂದು ಬರೆದುಕೊಂಡಿದ್ದಾರೆ.

ಮಥುರಾ ಲೋಕಸಭಾ ಕ್ಷೇತ್ರದಿಂದ ಹೇಮಾ ಮಾಲಿನಿ ಅವರು ಸತತ ಮೂರನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

2014ರಲ್ಲಿ ಮೊದಲ ಬಾರಿಗೆ ಮಥುರಾದಲ್ಲಿ ಸ್ಪರ್ಧಿಸಿದ್ದ ಹೇಮಾ ಮಾಲಿನಿ, ಗೆಲುವು ಸಾಧಿಸಿದ್ದರು. 2019ರಲ್ಲಿ ಮತ್ತೆ ಮಥುರಾದಲ್ಲಿ ಕಣಕ್ಕಿಳಿದು ಗೆದ್ದು ಸಂಸದರಾಗಿದ್ದರು.

ಈ ಬಾರಿ ಮತ್ತೆ ಅದೃಷ್ಟ ಪರೀಕ್ಷೆಗಿಳಿದ ಹೇಮಾ ಮಾಲಿನಿ, ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.