ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಅವರು ಅಮೇಠಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಚೇರಿಯ ಹೊರಗೆ ಪೋಸ್ಟರ್ಗಳನ್ನು ಅಳವಡಿಸಲಾಗಿದೆ.

ಅಮೇಠಿ ಕ್ಷೇತ್ರದ ಹಲವೆಡೆ ಹೆಚ್ಚಿನ ಸಂಖ್ಯೆಯಲ್ಲಿ ಪೋಸ್ಟರ್ಗಳನ್ನು ಅಳವಡಿಸಿರುವ ವಿಡಿಯೊವನ್ನು ‘ಪಿಟಿಐ’ ಎಕ್ಸ್ನಲ್ಲಿ ಹಂಚಿಕೊಂಡಿದೆ. ಈಚೆಗೆ ಖುದ್ದು ವಾದ್ರಾ ಅವರೇ, ಅಮೇಠಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಇಂಗಿತ ವ್ಯಕ್ತಪಡಿಸಿದ್ದರು.

ಅಮೇಠಿಯ ಜನರು ಹಾಲಿ ಸಂಸದೆ ಸ್ಮೃತಿ ಇರಾನಿ ಅವರ ಕಾರ್ಯವೈಖರಿಯಿಂದ ಬೇಸತ್ತಿದ್ದು, ಗಾಂಧಿ ಕುಟುಂಬದ ಸದಸ್ಯರೊಬ್ಬರು ಸ್ಪರ್ಧಿಸುವುದನ್ನು ಬಯಸುತ್ತಿದ್ದಾರೆ ಎಂದು ಅವರು ತಿಳಿಸಿದ್ದರು.

‘ನಾನು ಸಂಸದನಾಗಲು ನಿರ್ಧರಿಸಿದರೆ, ಅಮೇಠಿ ಕ್ಷೇತ್ರವನ್ನು ಪ್ರತಿನಿಧಿಸಬೇಕೆಂದು ಅಲ್ಲಿಯ ಜನರು ನಿರೀಕ್ಷಿಸುತ್ತಾರೆ. ರಾಯಬರೇಲಿ, ಅಮೇಠಿ ಮತ್ತು ಸುಲ್ತಾನ್ಪುರದ ಅಭಿವೃದ್ಧಿಗಾಗಿ ಗಾಂಧಿ ಕುಟುಂಬ ಹಲವು ವರ್ಷಗಳಿಂದ ಕಠಿಣವಾಗಿ ದುಡಿದಿದೆ. ಹಾಲಿ ಸಂಸದರಿಂದಾಗಿ ಅಮೇಠಿಯ ಜನರು ತೊಂದರೆಗೆ ಸಿಲುಕಿದ್ದಾರೆ. ಅವರನ್ನು ಆಯ್ಕೆ ಮಾಡಿ ತಪ್ಪು ಮಾಡಿದ್ದೇವೆ ಎಂದು ಮತದಾರರು ಭಾವಿಸಿದ್ದಾರೆ. ನಾನು ಅಲ್ಲಿಂದ ಸ್ಪರ್ಧಿಸಬೇಕು ಎಂದು ಬಯಸಿದ್ದಾರೆ’ ಎಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.