ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇಂದು (ಶುಕ್ರವಾರ) ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ನ್ಯಾಯ ಪತ್ರ’ ಎಂಬ ಹೆಸರಿನಲ್ಲಿ ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಯುವ ನ್ಯಾಯ, ನಾರಿ ನ್ಯಾಯ, ಕಿಸಾನ್ ನ್ಯಾಯ, ಶ್ರಮಿಕ ನ್ಯಾಯ ಮತ್ತು ಹಿಸ್ಸೇದಾರಿ ನ್ಯಾಯ ಎಂಬ ಪಂಚ ನ್ಯಾಯದ ಅಡಿಯಲ್ಲಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ.

ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖಾಂಶಗಳು ಕೆಳಕಂಡಂತಿವೆ:

ದೇಶದಾದ್ಯಂತ ಸಾಮಾಜಿಕ–ಆರ್ಥಿಕ ಮತ್ತು ಜಾತಿ ಗಣತಿಯನ್ನು ಕೈಗೊಳ್ಳುವುದು

ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳ ಮೀಸಲಾತಿಯನ್ನು ಶೇ 50ಕ್ಕೆ ಹೆಚ್ಚಿಸಲು ಕಾನೂನು ತಿದ್ದುಪಡಿ ತರುವುದು.

ಎಲ್ಲಾ ಜಾತಿ ಮತ್ತು ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ಒದಗಿಸಲಾಗುವುದು

ಡಿಪ್ಲೊಮಾ ಅಥವಾ ಪದವಿ ಹೊಂದಿರುವ 25 ವರ್ಷದೊಳಗಿನವರಿಗೆ ಒಂದು ವರ್ಷದ ಅಪ್ರೆಂಟಿಶಿಪ್ ಒದಗಿಸಲು ಕಾಯ್ದೆ ಜಾರಿಗೊಳಿಸಲಾಗುವುದು

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿ ನೀಡುವುದು

ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ರಾಜ್ಯ ಸ್ಥಾನಮಾನವನ್ನು ತಕ್ಷಣವೇ ಮರುಸ್ಥಾಪಿಸುವುದು

ಅಗ್ನಿಪಥ ಯೋಜನೆಯನ್ನು ರದ್ದುಗೊಳಿಸುವುದು

ಕಾರ್ಮಿಕರ ರಾಷ್ಟ್ರೀಯ ಕನಿಷ್ಠ ವೇತನ ದಿನಕ್ಕೆ ₹400ಕ್ಕೆ ಏರಿಕೆ.

ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ರಾಜಸ್ಥಾನ ಸರ್ಕಾರ ಜಾರಿಗೆ ತಂದ ₹25 ಲಕ್ಷವರೆಗಿನ

ನಗದುರಹಿತ ವಿಮೆಯನ್ನು ದೇಶದಾದ್ಯಂತ ಜಾರಿಗೊಳಿಸಲಾಗುವುದು

ದೇಶದ ಪ್ರತಿ ಬಡ ಕುಟುಂಬಕ್ಕೆ ವರ್ಷಕ್ಕೆ ₹1 ಲಕ್ಷ ನೀಡಲು ಮಹಾಲಕ್ಷಿ ಯೋಜನೆಯ ಪ್ರಾರಂಭ

ಸರ್ಕಾರ, ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ನಿಯಮಿತ ಉದ್ಯೋಗಗಳ ಗುತ್ತಿಗೆಯನ್ನು ರದ್ದುಗೊಳಿಸುವುದು. ಅಂತಹ ನೇಮಕಾತಿಗಳನ್ನು ಕ್ರಮಬದ್ಧಗೊಳಿಸುವುದನ್ನು ಖಚಿತಪಡಿಸುವುದು

ಕೇಂದ್ರ ಸರ್ಕಾರದಲ್ಲಿ ವಿವಿಧ ಹಂತಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಸುಮಾರು 30 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು.

ಸರ್ಕಾರಿ ಉದ್ಯೋಗಗಳು ಹಾಗೂ ಪರೀಕ್ಷೆಗಳ ಅರ್ಜಿ ಶುಲ್ಕಗಳ ರದ್ದು

ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮದಡಿ (ಎನ್‌ಎಸ್‌ಎಪಿ) ಹಿರಿಯ ನಾಗರಿಕರು, ವಿಧವೆಯರು ಮತ್ತು ಅಂಗವಿಕಲ ವ್ಯಕ್ತಿಗಳ ಪಿಂಚಣಿಗೆ ಕೇಂದ್ರವು ನೀಡುವ ನೆರವಿನ ಮೊತ್ತವನ್ನು ₹1,000ಕ್ಕೆ ಏರಿಸಲಾಗುವುದು.

2025ರಿಂದ ಹೊಸದಾಗಿ ಸೃಜಿಸುವ ಕೇಂದ್ರ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಮೀಸಲಾತಿ

21 ವರ್ಷ ಒಳಗಿನ ಪ್ರತಿಭಾವಂತ ಮತ್ತು ಉದಯೋನ್ಮುಖ ಕ್ರೀಡಾಪಟುಗಳಿಗೆ ತಿಂಗಳಿಗೆ ₹10,000 ಕ್ರೀಡಾ ವಿದ್ಯಾರ್ಥಿವೇತನ ನೀಡುವುದು

ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಪಿ.ಚಿದಂಬರಂ ಅವರ ಸಮ್ಮುಖದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ವೇಳೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ ಹಾಗೂ ಕೆ.ಸಿ ವೇಣುಗೋಪಾಲ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.