ಪಟ್ನಾ: ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸಾಧನೆ ಕುರಿತು ಮೆಲುಕು ಹಾಕಿರುವ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ‘ದೇಶದಲ್ಲಿ ಮೋದಿ ಹವಾ ಮಾಯವಾಗಿದೆ’ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚಿಸಲು ನೀವು ಪ್ರಯತ್ನಿಸುತ್ತಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಹೌದು, ನಾವು ಪ್ರಯತ್ನಿಸುತ್ತಲೇ ಇರುತ್ತೇವೆ. ಜನರು ಸಹ ಪ್ರಯತ್ನಿಸುತ್ತಲೇ ಇರಬೇಕು. ಏಕೆ ಪ್ರಯತ್ನ ಮಾಡಬಾರದು’ ಎಂದು ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಬಣ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ನಾವು ಸಮಸ್ಯೆಗಳನ್ನು ಆಧರಿಸಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆವು. ಅಯೋಧ್ಯೆ ಕ್ಷೇತ್ರದಲ್ಲೇ ಭಗವಾನ್ ‘ಶ್ರೀರಾಮ’ ನಮ್ಮ ಮೈತ್ರಿ ಅಭ್ಯರ್ಥಿಗೆ ಆಶೀರ್ವದಿಸಿದ್ದಾನೆ. ಹಾಗಾಗಿ ದೇಶದಲ್ಲಿ ಮೋದಿ ಹವಾ ಮುಗಿದಿದೆ ಎಂಬುದಕ್ಕೆ ಇದೇ ನಿದರ್ಶನ ಎಂದು ಗುಡುಗಿದ್ದಾರೆ.

ಬಿಜೆಪಿಯವರಿಗೆ ಸ್ಪಷ್ಟಬಹುಮತ ಸಿಕ್ಕಿಲ್ಲ. ಹಾಗಾಗಿ ಅವರು ಮಿತ್ರಪಕ್ಷಗಳ ಮೇಲೆ ಅವಲಂಬಿತವಾಗಿದ್ದಾರೆ. ನಾವು ಸಂವಿಧಾನವನ್ನು ರಕ್ಷಿಸುವಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಯಶಸ್ವಿಯಾಗಿದ್ದೇವೆ ಎಂದು ತೇಜಸ್ವಿ ಹೇಳಿದ್ದಾರೆ.

543 ಸದಸ್ಯ ಬಲದ ಲೋಕಸಭೆಗೆ ಏಪ್ರಿಲ್ 19ರಿಂದ ಜೂನ್ 1ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಜೂನ್ 4 (ಮಂಗಳವಾರ) ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 291 ಸ್ಥಾನಗಳನ್ನು ಹಾಗೂ 'ಇಂಡಿಯಾ' ಮೈತ್ರಿಕೂಟ 234 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಸರ್ಕಾರ ರಚಿಸುವ ಸಂಬಂಧ ಎನ್ಡಿಎ ಹಾಗೂ ಇಂಡಿಯಾ ನಾಯಕರು ಇಂದು ಸಭೆ ನಡೆಸಲಿದ್ದಾರೆ.
.ಪ್ರಧಾನಿ ಅಭ್ಯರ್ಥಿ ಯಾರೆಂದು ನಿರ್ಧರಿಸುತ್ತೇವೆ: ‘ಇಂಡಿಯಾ’ ಸಭೆಗೂ ಮುನ್ನ ಠಾಕ್ರೆ.ನರೇಂದ್ರ ಮೋದಿ ಸರ್ಕಾರ ರಚಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ: ಚಿದಂಬರಂ ಟೀಕೆ.Lok Sabha Results | ಮರಳು ಕಲಾಕೃತಿ ರಚಿಸಿ ಪ್ರಧಾನಿ ಮೋದಿಗೆ ಶುಭ ಕೋರಿದ ಕಲಾವಿದ.Lok Sabha Election Results | ಪ್ರಧಾನಿ ಮೋದಿಗೆ ಶುಭ ಹಾರೈಸಿದ ವಿದೇಶಿ ನಾಯಕರು.'ಇಂಡಿಯಾ' ಮೈತ್ರಿಕೂಟದ 'ಜನ-ಪ್ರಿಯ ಗೆಲುವು': ಅಖಿಲೇಶ್ ಯಾದವ್.ವಯನಾಡ್ ಅಥವಾ ರಾಯ್ಬರೇಲಿ: ರಾಹುಲ್ ಯಾವ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ?.ಸರ್ಕಾರ ರಚನೆ ಪ್ರಯತ್ನವೋ ವಿಪಕ್ಷದಲ್ಲಿ ಕೂರುವುದೋ: ‘ಇಂಡಿಯಾ’ದಿಂದ ಇಂದು ನಿರ್ಧಾರ.LS | 10-11 ಲಕ್ಷ ಮತಗಳ ಅಂತರ: ಹೆಚ್ಚು ಅಂತರದಿಂದ ಗೆದ್ದ ಟಾಪ್ 5 ಅಭ್ಯರ್ಥಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.