ಶನಿವಾರ, 28 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜನರ ಹಾಗೂ ಪ್ರಜಾತಂತ್ರದ ಗೆಲುವು, ಮೋದಿಗೆ ನೈತಿಕ ಸೋಲು: ಖರ್ಗೆ

Published : 4 ಜೂನ್ 2024, 12:49 IST
Last Updated : 4 ಜೂನ್ 2024, 12:49 IST
ಫಾಲೋ ಮಾಡಿ
Comments

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಹೊರಬರುತ್ತಿದ್ದು, ಎನ್‌ಡಿಎ ಸರಳ ಬಹುಮತದತ್ತ ಮುನ್ನಡೆಯುತ್ತಿದ್ದರೂ 'ಇಂಡಿಯಾ' ಮೈತ್ರಿಕೂಟ ಗಮನಾರ್ಹ ಸಾಧನೆ ಮಾಡಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಇದು ಜನರ ಹಾಗೂ ಪ್ರಜಾತಂತ್ರದ ಗೆಲುವುದಾಗಿದ್ದು, ಪ್ರಧಾನಿ ನರೇಂದ್ರ ಮೋದಿಗೆ ರಾಜಕೀಯ ಹಾಗೂ ನೈತಿಕ ಸೋಲು ಎದುರಾಗಿದೆ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ ತಾಜಾ ಟ್ರೆಂಡ್ ಪ್ರಕಾರ (ಸಂಜೆ 6ಕ್ಕೆ) ಎನ್‌ಡಿಯಾ 290, ಇಂಡಿಯಾ ಮೈತ್ರಿಕೂಟ 236 ಹಾಗೂ ಇತರರು 17 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ಸಂಖ್ಯೆ 272 ಆಗಿದೆ.

‘ಜನರು ಯಾವುದೇ ಪಕ್ಷಕ್ಕೆ ಸ್ಪಷ್ಟ ಜನಾದೇಶ ನೀಡಿಲ್ಲ. ಈ ಜನಾದೇಶ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವಾಗಿದೆ‘ ಎಂದು ಅವರು ಹೇಳಿದ್ದಾರೆ.

‘ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ವಿರೋಧ ಪಕ್ಷಗಳ ವಿರುದ್ಧ ಬಳಕೆ ಮಾಡಲು ಯತ್ನಿಸಿತ್ತು‘ ಎಂದು ಅವರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT