ಫತೇಪುರ (ಉ.ಪ್ರದೇಶ): 'ಲೋಕಸಭೆ ಚುನಾವಣೆಯಲ್ಲಿ ತನ್ನ ಗೌರವವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ 50 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಉತ್ತರ ಪ್ರದೇಶದ ಫತೇಪುರದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಮೋದಿ, '2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಸೋತ ರಾಹುಲ್ ಗಾಂಧಿ ಈಗ ಅಮೇಠಿಯಿಂದ ಓಡಿ ಹೋಗಿದ್ದಾರೆ' ಎಂದು ಲೇವಡಿ ಮಾಡಿದ್ದಾರೆ.

'ಅಮೇಠಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಧೈರ್ಯವಿಲ್ಲ ಎಂದು ನಾನು ಭವಿಷ್ಯ ನುಡಿದಿದ್ದೆ. ಅದೀಗ ನಿಜವಾಗಿದೆ' ಎಂದು ಅವರು ಹೇಳಿದ್ದಾರೆ.

'ತನ್ನ ಗೌರವವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಈಗ ಮಿಷನ್ 50 ಅನ್ನು ಆರಂಭಿಸಿದೆ. ಹೇಗಾದರೂ ಮಾಡಿ 50 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಗುರಿಯಾಗಿದೆ' ಎಂದು ಅವರು ಆರೋಪಿಸಿದ್ದಾರೆ.
.ಅಟಲ್ ಸೇತುವೆ ಬಗ್ಗೆ ರಶ್ಮಿಕಾ ಮಂದಣ್ಣ ಪೋಸ್ಟ್: ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ.ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ, ಮೀಸಲಾತಿ ರದ್ದು: ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.