ಹೈದರಾಬಾದ್: ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಚೆಗೆ ನಡೆದ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿವಾದಕ್ಕೆ ಕಾರಣವಾಗಿತ್ತು.

ಮಾಧವಿ ಲತಾ ವಿರುದ್ಧ ಐಪಿಸಿ ಸೆಕ್ಷನ್ 295-ಎ (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಬಗ್ಗೆ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ್ದ ಮಾಧವಿ, ‘ಅದು ಅಪೂರ್ಣ ವಿಡಿಯೊ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆ ವಿಡಿಯೊ ಕಾರಣದಿಂದ ಯಾರ ಭಾವನೆಗಾದರೂ ನೋವು ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಎಲ್ಲರ ಭಾವನೆಗಳನ್ನು ಗೌರವಿಸುವವಳು ನಾನು’ ಎಂದು ಹೇಳಿದ್ದರು.

‘ಬಿಜೆಪಿ ಮತ್ತು ಆರ್ಎಸ್ಎಸ್ನವರು ಜನರ ಮಧ್ಯೆ ಒಡಕು ಮೂಡಿಸಿ ಬ್ರಾಂಡ್ ಹೈದರಾಬಾದ್ ಪರಿಕಲ್ಪನೆಗೆ ಧಕ್ಕೆ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ’ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಟೀಕಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.