ಹೈದರಾಬಾದ್: ಇಲ್ಲಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ತೆಲಂಗಾಣ ರಾಜ್ಯವನ್ನು ಕಾಂಗ್ರೆಸ್ ‘ದೆಹಲಿಯ ಎಟಿಎಂ‘ ಮಾಡಿದೆ ಎಂದು ಗೃಹ ಸಚಿವ ಅಮಿತ್ ಶಾ ಆರೋಪಿಸಿದರು.
ಮೆಡಕ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಘುನಾಥನ್ ರಾವ್ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ತೆಲಂಗಾಣವನ್ನು ಎಟಿಎಂ ಮಾಡಿಕೊಂಡಿದೆ. ಬಿಆರ್‌ಎಸ್‌ನ ಕಾಲೇಶ್ವರಂ, ಭೂಹಗರಣಗಳು ಅಥವಾ ಇತರೆ ಯಾವುದೇ ಹಗರಣಗಳ ಬಗ್ಗೆ ಕಾಂಗ್ರೆಸ್ ತನಿಖೆ ಮಾಡುತ್ತಿಲ್ಲ. ಭ್ರಷ್ಟಾಚಾರಕ್ಕಾಗಿ ಕಾಂಗ್ರೆಸ್ ಮತ್ತು ಬಿಆರ್‌ಎಸ್ ಮೈತ್ರಿ ಮಾಡಿಕೊಂಡಿವೆ ಎಂದರು.
ನೀವು ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಿ, ಅವರು ತೆಲಂಗಾಣವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುತ್ತಾರೆ ಎಂದು ಅವರು ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಮಾತ್ರ ತೆಲಂಗಾಣದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಅಮಿತ್ ಶಾ ಹೇಳಿದರು.