ಬರ್ಪೇಟ (ಅಸ್ಸಾಂ): ದೇಶದಲ್ಲಿ ಶೇ 65ರಷ್ಟು ವಿದ್ಯಾವಂತ ಯುವಕರು ಉದ್ಯೋಗವಿಲ್ಲದೆ ಇದ್ದಾರೆ. ಇದಕ್ಕೆ ಬಿಜೆಪಿ ನೇರ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂನ ಬರ್ಪೇಟ ಜಿಲ್ಲೆಯ ಕಾಯಕುಚಿಯ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಅವರು, ದೇಶದಲ್ಲಿ ನಿರುದ್ಯೋಗ ದೊಡ್ಡ ಸಮಸ್ಯೆಯಾಗಿದ್ದು, ಶೇ 65ರಷ್ಟು ಯುವಜನತೆಗೆ ಉದ್ಯೋಗವಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಮುಸ್ಲಿಂ ಲೀಗ್ನ ಪ್ರತಿರೂಪದಂತಿದೆ ಎನ್ನುವ ಬಿಜೆಪಿ ಆರೋಪವನ್ನು ನಿರಾಕರಿಸಿರುವ ಅವರು ‘ನರೇಂದ್ರ ಮೋದಿ ಅವರ ಸುಳ್ಳಿನ ಫ್ಯಾಕ್ಟರಿ ಸದಾ ಯಶಸ್ವಿ ಆಗಲ್ಲ’ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರನ್ನು ‘ಸುಳ್ಳುಗಾರರ ಸರದಾರ’ ಎಂದು ಕರೆದ ಖರ್ಗೆ ಅವರು, ‘ವಾರ್ಷಿಕ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದು, ಕಪ್ಪು ಹಣ ವಾಪಸ್ ತಂದು ಪ್ರತಿಯೊಬ್ಬರಿಗೂ ₹15 ಲಕ್ಷ ಕೊಡುತ್ತೇನೆ ಎಂದಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿದ್ದು ಎಲ್ಲವೂ ಸುಳ್ಳು’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.