ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಶುಕ್ರವಾರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ್ಯಾಯ ಪತ್ರದ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಚಿದಂಬರಂ ಹಾಗೂ ವೇಣುಗೋಪಾಲ್ ಉಪಸ್ಥಿತರಿದ್ದರು.

ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲಾಗುವುದು ಎಂದು ಹೇಳಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ, ಅಗ್ನಿಪಥ್ ಯೋಜನೆ ರದ್ದು, ವಿವಿಧ ಹಂತಗಳಲ್ಲಿ 30 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ, ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳಿಗಿರುವ ಮೀಸಲಾತಿ ಮೀತಿ ಹೆಚ್ಚಳ ಹಾಗೂ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಈಗಾಗಲೇ ಕಾಂಗ್ರೆಸ್ ಪಕ್ಷವು ‘ಪಂಚ ನ್ಯಾಯ’, ‘25 ಗ್ಯಾರಂಟಿ’ಗಳನ್ನು ಘೋಷಿಸಿದೆ. ‘ಮನೆ ಮನೆ ಗ್ಯಾರಂಟಿ’ ಅಭಿಯಾನವು ಆರಂಭವಾಗಿದೆ. ದೇಶದಾದ್ಯಂತ ಸಮಾಲೋಚನೆಗಳನ್ನು ನಡೆಸಿ ಕಾಂಗ್ರೆಸ್, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಇ –ಮೇಲ್ ಹಾಗೂ ‘ಆವಾಜ್ ಭಾರತ್ ಕಿ’ ವೆಬ್‌ಸೈಟ್ ಮೂಲಕ ಇದಕ್ಕೆ ಸಾವಿರಾರು ಸಲಹೆಗಳು ಬಂದಿದ್ದವು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
.ಲೋಕಸಭೆ ಚುನಾವಣೆ–ಪ್ರಣಾಳಿಕೆ ಅಂಗೀಕರಿಸಲು ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ.ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿಗೆ ಚಿದಂಬರಂ ಅಧ್ಯಕ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.