ಪಟ್ನಾ: ಕೇಂದ್ರದಲ್ಲಿ 'ಇಂಡಿಯಾ' ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜನರ ಸೇವೆ ಸಲ್ಲಿಸಲು ತನ್ನನ್ನು ದೇವರು ಕಳುಹಿಸಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಲಾಲು ಲೇವಡಿ ಮಾಡಿದ್ದಾರೆ.

ಜೂನ್ 4ರಂದು ಎಲ್ಲ ಸ್ಪಷ್ಟವಾಗಲಿದ್ದು, 'ಇಂಡಿಯಾ' ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಅವರು ಹೇಳಿದ್ದಾರೆ.

'ದೇವರ ಅವತಾರ ಎಂದು ಮೋದಿ ತಮ್ಮನ್ನು ತಾವೇ ಕರೆಯುತ್ತಾರೆ. ದೇವರ ಸಂದೇಶವಾಹಕ ಎಂದು ಹೇಳುತ್ತಾರೆ. ಲೋಕಸಭೆ ಚುನಾವಣೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಮೋದಿಗೆ ತಕ್ಕ ಉತ್ತರ ಸಿಗಲಿದೆ' ಎಂದು ಅವರು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಎನ್ಡಿಒ ಒಕ್ಕೂಟ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಬದಲಾಯಿಸಲಿದ್ದು, ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಲಾಲು ಆತಂಕ ವ್ಯಕ್ತಪಡಿಸಿದ್ದಾರೆ.

'ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನವನ್ನು ರೂಪಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಎನ್ಡಿಎ ನಾಯಕರು ಸಂವಿಧಾನವನ್ನು ದ್ವೇಷಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ.
.ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ: ಜೂ. 7ರಂದು ವಿಚಾರಣೆ.ಯಾವುದೇ ರೀತಿಯಲ್ಲಾದರೂ ಅಧಿಕಾರ ಹಿಡಿಯುವುದು ಪ್ರಧಾನಿ ಮೋದಿ ಗುರಿ: ಪ್ರಿಯಾಂಕಾ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.