ಚಂಡೀಗಢ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಪುನರುಚ್ಚರಿಸಿದ್ದಾರೆ.

ಲೂಧಿಯಾನದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಸಂವಿಧಾನ ರಕ್ಷಣೆಯ ಚುನಾವಣೆ ಆಗಿದೆ ಎಂದು ಹೇಳಿದ್ದಾರೆ.

'ಇದೇ ಮೊದಲ ಬಾರಿಗೆ ಪಕ್ಷವೊಂದು ಚುನಾವಣೆಯಲ್ಲಿ ಗೆದ್ದರೆ ಸಂವಿಧಾನವನ್ನು ರದ್ದುಗೊಳಿಸುವುದಾಗಿ ಹೇಳುತ್ತಿದೆ. ಆದರೆ ಸಂವಿಧಾನದ ರಕ್ಷಣೆಗೆ ಕಾಂಗ್ರೆಸ್ ಹೋರಾಡಲಿದೆ' ಎಂದು ಹೇಳಿದ್ದಾರೆ.

ಸಂವಿಧಾನದ ಪ್ರತಿಯನ್ನು ಹಿಡಿದು ಮಾತನಾಡಿದ ಅವರು 'ಇದು ಬರಿ ಪುಸ್ತಕವಲ್ಲ, ಬಡವರ ಧ್ವನಿ' ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 'ಅಗ್ನಿಪಥ' ಯೋಜನೆಯನ್ನು ರದ್ದುಗೊಳಿಸಿ ಕಸದ ಬುಟ್ಟಿಗೆ ಎಸೆಯುವುದಾಗಿ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ.

'ರೈತರು ತೊಂದರೆ ಎದುರಿಸುತ್ತಿದ್ದು, ಬಿಜೆಪಿ ಸರ್ಕಾರ ಎಂಎಸ್ಪಿಗೆ ಕಾನೂನು ಖಾತ್ರಿ ನೀಡುತ್ತಿಲ್ಲ. ಆದರೆ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಎಂಎಸ್ಪಿಗೆ ಕಾನೂನು ಖಾತ್ರಿ, ರೈತರ ಸಾಲ ಮನ್ನಾ ಹಾಗಾ ಮಹಾಲಕ್ಷ್ಮಿ ಯೋಜನೆ ಜಾರಿಗೊಳಿಸುವುದಾಗಿ' ಭರವಸೆ ನೀಡಿದ್ದಾರೆ.

'ಪಂಜಾಬ್ನಲ್ಲಿ ಡ್ರಗ್ಸ್ ಸಮಸ್ಯೆ ಹೆಚ್ಚುತ್ತಿದೆ. ಈ ಹಾವಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ' ಎಂದು ಅವರು ಹೇಳಿದ್ದಾರೆ.
.ಹೃದಯ ಮತ್ತು ರಕ್ತದಿಂದ ಸಂವಿಧಾನ ರಕ್ಷಣೆ: ರಾಹುಲ್ ಗಾಂಧಿ.ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ: ಜೂ. 7ರಂದು ವಿಚಾರಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.