ಲಖನೌ: ಬಿಜೆಪಿ ಸರ್ಕಾರ ಬಡವರಿಗೆ ನೀಡುತ್ತಿದ್ದ ಉಚಿತ ಪಡಿತರವನ್ನು 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದ್ವಿಗುಣಗೊಳಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಘೋಷಿಸಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, 'ನೀವು (ಮೋದಿ) 5 ಕೆ.ಜಿ. ಪಡಿತರ ನೀಡುತ್ತಿದ್ದೀರಿ. ಆದರೆ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆಯಾದರೆ, ನಾವು ಬಡವರಿಗೆ 10 ಕೆ.ಜಿ ಪಡಿತರವನ್ನು ನೀಡಲಿದ್ದೇವೆ' ಎಂದು ಭರವಸೆ ನೀಡಿದ್ದಾರೆ.

ಕರ್ನಾಟಕ, ತೆಲಂಗಾಣದಲ್ಲಿ ನಾವಿದನ್ನು ಈಗಾಗಲೇ ಜಾರಿಗೆ ತಂದಿದ್ದೇವೆ ಎಂದು ಖರ್ಗೆ ಉಲ್ಲೇಖಿಸಿದ್ದಾರೆ.

ಆಹಾರ ಭದ್ರತಾ ಕಾಯ್ದೆಯನ್ನು ಕಾಂಗ್ರೆಸ್ ಜಾರಿಗೆ ತಂದಿತು. ಬಡವರಿಗಾಗಿ ನೀವು ಏನನ್ನೂ ಮಾಡಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
.ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ, ಮೀಸಲಾತಿ ರದ್ದು: ರಾಹುಲ್ ಗಾಂಧಿ.ರಾಯ್ಬರೇಲಿ | ರಾಹುಲ್ ಗಾಂಧಿ ಪರ ಪ್ರಚಾರ ನಡೆಸಲಿರುವ ಡಿ.ಕೆ.ಶಿವಕುಮಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.