ನವದೆಹಲಿ: ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯಗಳಲ್ಲಿ ನಡೆದ ವಿಧಾನಸಬಾ ಚುನಾವಣೆ ಹಿನ್ನೆಲೆ ಮಾರ್ಚ್ 16 ರಂದು ಜಾರಿಗೆ ತರಲಾಗಿದ್ದ ಮಾದರಿ ನೀತಿ ಸಂಹಿತೆಯನ್ನು ಇಂದು (ಜೂನ್ 6) ತೆರವುಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಲೋಕಸಭಾ ಚುನಾವಣೆ ಮತ್ತು ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ, ಆಂಧ್ರ ಪ್ರದೇಶ ರಾಜ್ಯಗಳಿಗೆ ಇದೇ ವೇಳೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಹೀಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮಾದರಿ ನೀತಿ ಸಂಹಿತೆಯನ್ನು ಅಂತ್ಯಗೊಳಿಸಲಾಗಿದೆ ಎಂದು ಚುನಾವಣಾ ಆಯೋಗವು ಕೇಂದ್ರ ಸಂಪುಟ ಕಾರ್ಯದರ್ಶಿ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದೆ.
.Explainer: ಚುನಾವಣಾ ಮಾದರಿ ನೀತಿ ಸಂಹಿತೆ– ಮೊದಲು ಜಾರಿಯಾಗಿದ್ದು ಇಲ್ಲಿ....ಮಾದರಿ ನೀತಿ ಸಂಹಿತೆ ಜಾರಿ: ರಾಜಕಾರಣಿಗಳ ಚಿತ್ರ, ಜಾಹೀರಾತು ತೆರವಿಗೆ ಸೂಚನೆ.
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದ ಜಾರಿಗೆ ಬರುವುದು ಮಾದರಿ ನೀತಿ ಸಂಹಿತೆ. 1960ರಲ್ಲಿ ರಾಜಕೀಯ ಪಕ್ಷಗಳಿಗಷ್ಟೇ ಸೀಮಿತವಾಗಿ ಕೇರಳ ವಿಧಾನಸಭಾ ಚುನಾವಣೆ ವೇಳೆ ಈ ನೀತಿ ಸಂಹಿತೆಯನ್ನು ಮೊದಲ ಬಾರಿಗೆ ಪರಿಚಯಿಸಲಾಗಿತ್ತು, ಹೀಗಾಗಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಕಳೆದ 64 ವರ್ಷಗಳಿಂದ ಈ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

ಪ್ರಚಾರ, ಕ್ರಮಬದ್ಧವಾದ ಮತದಾನ ಮತ್ತು ಎಣಿಕೆ, ಮತಗಟ್ಟೆಗಳಲ್ಲಿ ಸ್ವಚ್ಛ ಮತ್ತು ಶಾಂತಿಯುತ ವಾತಾವರಣವನ್ನು ಕಾಪಾಡುವುದು ಮತ್ತು ಅಧಿಕಾರದಲ್ಲಿರುವ ಪಕ್ಷದ ಹಸ್ತಕ್ಷೇಪ ಮತ್ತು ಆರ್ಥಿಕ ವ್ಯವಹಾರ ದುರುಪಯೋಗವನ್ನು ಪರಿಶೀಲಿಸುವುದು ಇದರ ಉದ್ದೇಶವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.