ಕೊಹಿಮಾ: ನಾಗಾಲ್ಯಾಂಡ್ ರಾಜ್ಯದ ಪೂರ್ವಭಾಗದ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನವಾಗಿದೆ ಎಂದು ವರದಿಯಾಗಿದೆ.

ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ಇಎನ್ಪಿಒ) ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿ, ಚುನಾವಣೆಯನ್ನು ಬಹಿಷ್ಕರಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ 6 ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ನಡೆದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾಗಾಲ್ಯಾಂಡ್ ಮುಖ್ಯ ಚುನಾವಣಾಧಿಕಾರಿಯು ಇಎನ್ಪಿಒಗೆ ಶೋಕಾಸ್ ನೊಟೀಸ್ ಜಾರಿ ಮಾಡಿದ್ದಾರೆ. ಚುನಾವಣೆ ಕಾರ್ಯಗಳಿಗೆ ಅಡ್ಡಿ ಪಡಿಸುವ ಸೆಕ್ಷನ್ 171ಸಿ ನಿಯಮದ ಅಡಿಯಲ್ಲಿ ಇಎನ್ಪಿಒ ವಿರುದ್ಧ ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ಚುನಾವಣೆ ಆಯೋಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.
.LS Polls | ಹಂತ–2; ಕಣ ಚಿತ್ರಣಕ್ಕೆ ಬಂತು ಆಕಾರ.LS Polls | ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಪ್ರಚಾರ ಇಂದು.
ನಾಗಾಲ್ಯಾಂಡ್ ರಾಜ್ಯದಲ್ಲಿ 16 ಜಿಲ್ಲೆಗಳಿವೆ. ರಾಜ್ಯದ ಪೂರ್ವ ಭಾಗದ 6 ಜಿಲ್ಲೆಗಳಲ್ಲಿ ಇಎನ್ಪಿಒ ಸಂಘಟನೆ ಪ್ರಬಲವಾಗಿದ್ದು ಪ್ರತ್ಯೇಕ ಆಡಳಿತಕ್ಕಾಗಿ ಹೋರಾಟ ಮಾಡುತ್ತಿದೆ. ಇಎನ್ಪಿಒ ಮತದಾನವನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದರಿಂದ ಮತದಾನದಿಂದ ಹಿಂದೆ ಸರಿಯಬೇಕಾಯಿತು ಎಂದು ಸ್ಥಳೀಯ ನಾಗರಿಕರೊಬ್ಬರು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಶೂನ್ಯ ಮತದಾನವಾದ ಜಿಲ್ಲೆಗಳ ವ್ಯಾಪ್ತಿಯಲ್ಲಿ 20 ಶಾಸಕರು ಇದ್ದಾರೆ. ಇವರೊಂದಿಗೆ ಹಾಗೂ ವಿವಿಧ ಸಂಘಟನೆಗಳ ಜೊತೆ ಸಮಾಲೋಚಿಸಿ ಮತದಾನ ಬಹಷ್ಕಾರದ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಇಎನ್ಪಿಒ ಹೇಳಿದೆ.

ನಾಗಾಲ್ಯಾಂಡ್ ರಾಜ್ಯದಲ್ಲಿ 60 ವಿಧಾನಸಭೆ ಹಾಗೂ ಒಂದು ಲೋಕಸಭಾ ಸ್ಥಾನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.