ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ: 13 ಕ್ಷೇತ್ರಗಳಲ್ಲಿ ಗೆಲುವು

ಅಸ್ಸಾಂನ 14ರಲ್ಲಿ 9 ಬಿಜೆಪಿಗೆ * ಮಣಿಪುರದ ಎರಡೂ ಕ್ಷೇತ್ರಗಳು ಕಾಂಗ್ರೆಸ್‌ಗೆ
Published : 4 ಜೂನ್ 2024, 15:48 IST
Last Updated : 4 ಜೂನ್ 2024, 15:48 IST
ಫಾಲೋ ಮಾಡಿ
Comments
ಮಣಿಪುರ ಕಾಂಗ್ರೆಸ್‌ ತೆಕ್ಕೆಗೆ
ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ನಾಗಾ ಪೀಪಲ್ಸ್‌ ಫ್ರಂಟ್‌ಗೆ (ಎನ್‌ಪಿಎಫ್‌) ಮುಖಭಂಗವಾಗಿದೆ. ಎನ್‌ಡಿಎ ಮೈತ್ರಿಕೂಟದ ತೆಕ್ಕೆಯಲ್ಲಿದ್ದ ಎರಡೂ ಲೋಕಸಭಾ ಕ್ಷೇತ್ರಗಳು ಕಾಂಗ್ರೆಸ್‌ ಪಾಲಾಗಿವೆ. ಬಿಜೆಪಿ ನೇತೃತ್ವದ ಸರ್ಕಾರ ಇದ್ದರೂ ಎರಡೂ ಕ್ಷೇತ್ರಗಳನ್ನು ಉಳಿಸಿಕೊಳ್ಳುವಲ್ಲಿ ಎನ್‌ಡಿಎ ವಿಫಲವಾಗಿದೆ. ವರ್ಷದ ಹಿಂದಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಗಲಭೆಯಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಸಹಸ್ರಾರು ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಶಿಬಿರಗಳಲ್ಲಿ ವಾಸವಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮಣಿಪುರ ರಾಜ್ಯದಲ್ಲಿ ಯಾವುದೇ ರೀತಿಯ ಅಬ್ಬರದ ಪ್ರಚಾರ ನಡೆದಿರಲಿಲ್ಲ. 2019ರಲ್ಲಿ ಒಂದು ಕ್ಷೇತ್ರದಲ್ಲಿ ಬಿಜೆಪಿ, ಮತ್ತೊಂದರಲ್ಲಿ ಎನ್‌ಪಿಎಫ್‌ ಗೆದ್ದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT