ಪಟ್ನಾ: ಬಿಹಾರದ ಕಾರಾಕಾಟ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಭೋಜಪುರಿ ಸಿನಿಮಾರಂಗದ ಸೂಪರ್ ಸ್ಟಾರ್ ಪವನ್ ಸಿಂಗ್ ಎದುರು ಅವರ ತಾಯಿ ಪ್ರತಿಮಾ ದೇವಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಹಾಗೂ ರಾಷ್ಟ್ರೀಯ ಲೋಕಮೊರ್ಚಾದ ಮುಖ್ಯಸ್ಥ ಉಪೇಂದ್ರ ಕುಶ್ವಾ ಅವರು ಕಾರಾಕಾಟ್ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿದ್ದಾರೆ. ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ಕಡೆಯಿಂದ ಸಿಪಿಐ(ಎಂ–ಎಲ್)ನ ರಾಜಾರಾಂ ಸಿಂಗ್ ಅವರು ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರಕ್ಕೆ 7ನೇ ಹಂತದಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ.

ಅಚ್ಚರಿಯ ಬೆಳವಣಿಗೆಯಲ್ಲಿ ಪ್ರತಿಮಾ ದೇವಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಸದಸ್ಯರಾಗಿರುವ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅವರ ಪುತ್ರ ಪವನ್ ಕಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಪವನ್ ಅವರಿಗೆ ಈ ಮೊದಲು ಪಶ್ಚಿಮ ಬಂಗಳಾದ ಅಸಾನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬಿಜೆಪಿ ಹೇಳಿತ್ತು. 195 ಅಭ್ಯರ್ಥಿಗಳ ಬಿಜೆಪಿಯ ಮೊದಲ ಪಟ್ಟಿಯಲ್ಲಿ ಪವನ್ ಅವರ ಹೆಸರೂ ಇತ್ತು. ಆದರೆ ಅವರು ಅದನ್ನು ತಿರಸ್ಕರಿಸಿದ್ದರಿಂದ, ಪಕ್ಷ ಮುಜುಗರ ಅನುಭವಿಸಿತ್ತು.

ಕಾರಾಕಾಟ್ನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದ ಪವನ್ಗೆ ಎನ್ಡಿಎ ಅಭ್ಯರ್ಥಿ ಎದುರು ಸ್ಪರ್ಧಿಸದಂತೆ ಪಕ್ಷದ ಹಿರಿಯರು ಸಿಂಗ್ಗೆ ಸೂಚಿಸಿದ್ದರು. ಇದರಿಂದ ಅಸಮಾಧಾನಗೊಂಡ ಪವನ್, ಆರ್ಜೆಡಿ ಪಕ್ಷದೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು ಎಂದು ಮೂಲಗಳು ಹೇಳಿವೆ.

ಈ ಬೆಳವಣಿಗೆ ಕುರಿತು ಪವನ್ ಸಿಂಗ್ ಹಾಗೂ ಪ್ರತಿಮಾ ದೇವಿ ಇಬ್ಬರೂ ಯಾವುದೇ ರೀತಿಯ ಹೇಳಿಕೆ ನೀಡಿಲ್ಲ. ನಾಮಪತ್ರ ಹಿಂಪಡೆಯಲು ಮೇ 17 ಕೊನೆಯ ದಿನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.