ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮತ್ತು ಪಿಡಿಪಿ ಪಕ್ಷದ ಅಧ್ಯಕ್ಷೆ ಮೆಹಬೂಬ ಮುಫ್ತಿ ಮತ ಎಣಿಕೆ ನಡೆಯುತ್ತಿರುವಾಗಲೇ ಸೋಲೊಪ್ಪಿಕೊಂಡಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಜೈಲಿನಲ್ಲಿರುವ ಮಾಜಿ ಶಾಸಕ ಶೇಖ್ ಅಬ್ದುಲ್ ರಶೀದ್ ಅವರು, ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ವಿರುದ್ಧ 1.25 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಪಡೆದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಒಮರ್, ’ಇದು ಅನಿವಾರ್ಯವಾಗಿ ಸೋಲೊಪ್ಪಿಕೊಳ್ಳುವ ಸಮಯವಾಗಿದೆ. ಉತ್ತರ ಕಾಶ್ಮೀರದಲ್ಲಿ ಗೆಲುವು ಸಾಧಿಸಿದ ಎಂಜಿನಿಯರ್ ರಶೀದ್ ಅವರಿಗೆ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಜನರ ಆದೇಶವೇ ಅಂತಿಮ ಎಂದು ಹೇಳಿದ್ದಾರೆ.

ಪಿಡಿಪಿ ವರಿಷ್ಠೆ ಮೆಹಬೂಬ ಮುಫ್ತಿ ಸಹ ಅನಂತ್ ನಾಗ್–ರಾಜೌರಿ ಲೋಕಸಭಾ ಕ್ಷೇತ್ರದಲ್ಲಿ ಸೋಲಿಗೆ ಶರಣಾಗಿದ್ದಾರೆ.

‘ಜನರ ತೀರ್ಪನ್ನು ಗೌರವಿಸುತ್ತೇನೆ. ಪಿಡಿಪಿ ಕಾರ್ಯಕರ್ತರು ಮತ್ತು ನಾಯಕರ ಬೆಂಬಲ ಹಾಗೂ ಪಟ್ಟ ಶ್ರಮಕ್ಕೆ ಧನ್ಯವಾದ ಹೇಳುತ್ತೇನೆ. ನನಗೆ ಮತ ಹಾಕಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಸೋಲು–ಗೆಲುವು ಸಾಮಾನ್ಯ. ಅವು ನಮ್ಮ ಹಾದಿ ಬದಲಿಸುವುದಿಲ್ಲ’ಎಂದು ಮುಫ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಕ್ಷೇತ್ರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗುಜ್ಜರ್ ಪಕ್ಷದ ನಾಯಕ ಅಗಾ ಸೈಯದ್ ರುಹುಲ್ಲಾ ಮೆಹಡಿ 2.29 ಲಕ್ಷ ಮತಗಳಿಂದ ಮುನ್ನಡೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.