ವಯನಾಡು: ತಮ್ಮ ಸಂಸದೀಯ ಕ್ಷೇತ್ರ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ಸುಲ್ತಾನ್ ಬತ್ತೇರಿ ಪ್ರದೇಶದಲ್ಲಿ ಕಾರಿನ ಮೇಲೆ ಕುಳಿತು ರಾಹುಲ್ ಗಾಂಧಿ ರೋಡ್ ಶೋ ನಡೆಸಿದ್ದು ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಕಾರ್ಯಕರ್ತರು ನೆರೆದಿದ್ದರು.

ರೋಡ್ ಶೋಗೂ ಮೊದಲು ತಮಿಳುನಾಡಿನ ಗಡಿಭಾಗದ ನೀಲಗಿರಿ ಜಿಲ್ಲೆಗೆ ತೆರಳಿ, ಅಲ್ಲಿನ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಕೃಷಿಕರೇ ಹೆಚ್ಚಾಗಿರುವ ಮಾನಂದವಾಡಿ, ವೆಲ್ಲಮುಂಡ ಮತ್ತು ಪಡಿಂಜರಥರಾ ಪ್ರದೇಶದಲ್ಲಿ ರೋಡ್ ಶೋ ನಡೆಸಿ ಅಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಜತೆಗೆ ಇತ್ತೀಚೆಗೆ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನದಿಂದ ವಿವಾದಕ್ಕೆ ಕಾರಣವಾಗಿದ್ದ ಮಾನಂದವಾಡಿ ಚರ್ಚ್‌ನ ಬಿಷಪ್ ಅವರನ್ನು ಭೇಟಿಯಾಗಿ ರಾಹುಲ್ ಚರ್ಚಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿಗೆ ರಾಹುಲ್ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ರಾಹುಲ್ ಹೆಲಿಕಾಪ್ಟರ್ ತಪಾಸಣೆ ಮಾಡಿದ ಚುನಾವಣಾ ಅಧಿಕಾರಿಗಳು

ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ಅನ್ನು ಚುನಾವಣಾ ಅಧಿಕಾರಿಗಳು ಸೋಮವಾರ ತಪಾಸಣೆ ನಡೆಸಿದರು.

ಕೇರಳದ ವಯನಾಡ್‌ಗೆ ತೆರಳುವ ಮುನ್ನ ನೀಲಿಗಿರಿಗೆ ತೆರಳಲು ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ್ದರು.

ರಾಹುಲ್ ಗಾಂಧಿ ಹೆಲಿಕಾಪ್ಟರ್‌ನಿಂದ ಇಳಿದ ನಂತರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಶೋಧ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.