ನವದೆಹಲಿ: ನೆಹರೂ ಮತ್ತು ಗಾಂಧಿ ಕುಟುಂಬ ಸ್ಪರ್ಧಿಸುತ್ತಾ ಬಂದಿರುವ ಅಮೇಠಿ ಮತ್ತು ರಾಯಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಇಂದು (ಗುರುವಾರ) ರಾತ್ರಿ ತೆರೆಬೀಳುವ ಸಾಧ್ಯತೆ ಇದೆ. ಅಮೇಠಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಮೂಲಗಳು ಖಚಿತಪಡಿಸಿವೆ.

ಈ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದೆ. ಮೇ 3ರಂದು ಮಧ್ಯಾಹ್ನ 3ರೊಳಗೆ ನಾಮಪತ್ರ ಸಲ್ಲಿಸಬೇಕಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಘೋಷಣೆ ಇಂದು ಹೊರಬೀಳುವ ಸಾಧ್ಯತೆ ಇದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ತಿಳಿಸಿದ್ದಾರೆ.
.ಕಾಂಗ್ರೆಸ್: ಅಮೇಠಿ, ರಾಯ್ಬರೇಲಿಯಲ್ಲಿ ಗಾಂಧಿ ಕುಟುಂಬ ಸ್ಪರ್ಧೆ ಸಾಧ್ಯತೆ.ಅಮೇಠಿ–ರಾಯ್ ಬರೇಲಿ ಅಭ್ಯರ್ಥಿಗಳ ಬಗ್ಗೆ ಗುಟ್ಟು ಬಿಟ್ಟುಕೊಡದ ಖರ್ಗೆ.
ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್‌ನ ಸಂಸದೀಯ ಮಂಡಳಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವ ಸಾಧ್ಯತೆ ಇದೆ. ರಾಯಬರೇಲಿಯಿಂದ ಇಂದಿರಾಗಾಂಧಿ ಅವರ ಸಂಬಂಧಿ ಶೀಲಾ ಕೌಲ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಆದರೆ ಪರ್ಯಾಯ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧೀ ವಾದ್ರಾ ಅವರ ನಾಮಪತ್ರವನ್ನೂ ಸಿದ್ಧಗೊಳಿಸಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧೀ ಮತ್ತು ಅಖಿಲೇಶ್ ಯಾದವ್ ಅವರ ಭಾವಚಿತ್ರವಿರುವ ಪೋಸ್ಟರ್‌ಗಳನ್ನು ಗುರುವಾರ ಸಂಜೆ ಅಮೇಠಿಯಲ್ಲಿ ಅಳವಡಿಸುವ ಕಾರ್ಯ ಕಂಡುಬಂತು.

2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅವರು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡಿದ್ದರು.

ಅಮೇಠಿಯಿಂದ ಈ ಬಾರಿಯೂ ಸ್ಪರ್ಧಿಸಿರುವ ಹಾಲಿ ಸಂಸದೆ ಸ್ಮೃತಿ ಇರಾನಿ ಅವರ ಈಗಾಗಲೇ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.