ಜೈಪುರ: ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಾಂಗ್ರೆಸ್ ನಾಯಕ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ.

ಜೈಪುರದಲ್ಲಿ ನಡೆದ ಪಕ್ಷದ ಲೋಕಸಭೆ ಚುನಾವಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ತಮ್ಮನ್ನು ತಾವೇ ಶ್ರೇಷ್ಠ ಎಂದು ಬಿಂಬಿಸಿಕೊಳ್ಳುವ ಪ್ರಧಾನಿ ಮೋದಿ, ದೇಶದ ಘನತೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಿತ್ತು ಹಾಕುತ್ತಿದ್ದಾರೆ. ಅನೇಕ ತಂತ್ರಗಳನ್ನು ಹೆಣೆದು ವಿರೋಧ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲಾಗುತ್ತಿದೆ' ಎಂದು ಅವರು ಆರೋಪಿಸಿದರು.

'ನಮ್ಮ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ದೇಶದ ಸಂವಿಧಾನವನ್ನು ಬದಲಾಯಿಸಲು ಸಂಚು ನಡೆಯುತ್ತಿದೆ. ಇದು ಸರ್ವಾಧಿಕಾರಿ ಧೋರಣೆಯಾಗಿದ್ದು, ನಾವೆಲ್ಲರೂ ಇದರ ವಿರುದ್ಧ ಹೋರಾಡಬೇಕಿದೆ' ಎಂದು ಅವರು ಮನವಿ ಮಾಡಿದರು.
.ಲೋಕಸಭಾ ಚುನಾವಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಟ್ಟು ಆಸ್ತಿ ಎಷ್ಟು ಗೊತ್ತಾ?.ಸಿದ್ದರಾಮಯ್ಯ– ಅಮಿತ್ ಶಾ | ನ್ಯಾಯ–ಅನ್ಯಾಯದ ರಾಜಕೀಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.