ಅಹಮದಾಬಾದ್ : ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ನೀಲೇಶ್ ಕುಂಭಾನಿ ಅವರನ್ನು ಗುಜರಾತ್ ಕಾಂಗ್ರೆಸ್ ಘಟಕವು ಆರು ವರ್ಷಗಳ ಅವಧಿಗೆ ಅಮಾನತು ಮಾಡಿದೆ.

ಕುಂಭಾನಿ ಅವರ ನಾಮಪತ್ರ ಕಳೆದ ಭಾನುವಾರ ತಿರಸ್ಕೃತಗೊಂಡಿತ್ತು. ಇದರ ಬೆನ್ನಲ್ಲೇ ಕಣದಲ್ಲಿದ್ದ ಇತರ ಎಂಟು ಅಭ್ಯರ್ಥಿಗಳು ಹಿಂದೆ ಸರಿದಿದ್ದರು. ಇದರ ಪರಿಣಾಮವಾಗಿ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ನಾಮಪತ್ರ ತಿರಸ್ಕೃತಗೊಳ್ಳಲು ಕುಂಭಾನಿ ಅವರ ನಿರ್ಲಕ್ಷ್ಯ ಅಥವಾ ಬಿಜೆಪಿ ಜತೆಗಿನ ಹೊಂದಾಣಿಕೆಯೇ ಕಾರಣ ಎಂಬುದನ್ನು ಮನಗಂಡ ಕಾಂಗ್ರೆಸ್ ಶಿಸ್ತು ಸಮಿತಿಯು ಅವರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

‘ನಾಮಪತ್ರ ತಿರಸ್ಕೃತಗೊಂಡ ಬಳಿಕ ನಿಮ್ಮ ವಾದವನ್ನು ಮಂಡಿಸಲು ಸಮಯಾವಕಾಶ ಕೊಟ್ಟಿದ್ದೆವು. ಆದರೆ ಪಕ್ಷದ ಶಿಸ್ತು ಸಮಿತಿ ಮುಂದೆ ಹಾಜರಾಗುವ ಬದಲು, ಯಾರ ಸಂಪರ್ಕಕ್ಕೂ ಸಿಗಲಿಲ್ಲ. ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ನೀವು ಹಾದಿಯೊದಗಿಸಿದ್ದೀರಿ. ಈ ಬೆಳವಣಿಗೆಯು ಸೂರತ್ನ ಜನರ ಮತದಾನದ ಹಕ್ಕನ್ನು ಕಸಿದುಕೊಂಡಿದೆ. ಜನರು ಹಾಗೂ ಪಕ್ಷದ ಕಾರ್ಯಕರ್ತರು ಕೋಪಗೊಂಡಿದ್ದು, ವಿವಿಧ ರೀತಿಯಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ. ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತು ಮಾಡಲು ಪಕ್ಷವು ನಿರ್ಧರಿಸಿದೆ’ ಎಂದು ಶಿಸ್ತು ಸಮಿತಿಯು ಕುಂಭಾನಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.