ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿನಿಖಿಲ್ ನಾಮಪತ್ರ ಪರಿಶೀಲನೆ, ಅನುಮೋದನೆ ವಿಚಾರದಲ್ಲಿ ಗೊಂದಲಗಳು ಸೃಷ್ಟಿಯಾಗಿದ್ದ ಕಾರಣ ರಾಜ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಶನಿವಾರ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜಿಲ್ಲಾ ಚುನಾವಣಾಧಿಕಾರಿ ನಾಮಪತ್ರ ಪರಿಶೀಲನೆ ಮಾಡಿ, ಅನುಮೋದನೆ ಮಾಡಿದ ನಂತರ ಅದನ್ನು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಏನೇ ಆಕ್ಷೇಪಣೆ ಇದ್ದರೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಚುನಾವಣಾಧಿಕಾರಿ ಏಕಪಕ್ಷೀಯವಾಗಿ ನಡೆದುಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು’ ಎಂದರು.

ನಾಮಪತ್ರ ಪರಿಶೀಲನೆ ವೇಳೆ ಜಿಲ್ಲಾ ಚುನಾವಣಾಧಿಕಾರಿ ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿ ಸುಮಲತಾ ಬೆಂಬಲಿಗರು ಸಂಜೀವ್ ಕುಮಾರ್ ಅವರಿಗೆ ದೂರು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.