ರಾಣೆಬೆನ್ನೂರು: ‘ಪ್ರಧಾನಿ ನರೇಂದ್ರ ಮೋದಿ ಈ ದೇಶವನ್ನು ಶಕ್ತಿಶಾಲಿಯನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಈ ಬಾರಿ ಕೇಂದ್ರದಲ್ಲಿ 400 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿದ್ದೇವೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಲು ಬಿಜೆಪಿಗೆ ಮತ ಹಾಕಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.

ರಾಣೆಬೆನ್ನೂರಿನಲ್ಲಿ ಬುಧವಾರ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರಾರ್ಥ ಬೃಹತ್ ರೋಡ್ ಶೋ ನಡೆಸಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಒಳ್ಳೆಯ ನಾಯಕರು. ದೇಶಕ್ಕೆ ಅವರ ಸೇವೆ ಅಗತ್ಯವಿದ್ದು, ಅವರನ್ನು ಗೆಲ್ಲಿಸಿ’ ಎಂದು ಕೋರಿದರು.

ಇದಕ್ಕೂ ಮೊದಲು ರಾಣೆಬೆನ್ನೂರಿನ ಕುರುಬಗೇರಿ ಕ್ರಾಸ್‌ನಿಂದ ಎಂ.ಜಿ. ರಸ್ತೆ ಮಾರ್ಗವಾಗಿ ಅಶೋಕ್ ಸರ್ಕಲ್‌ವರೆಗೂ ನಡೆದ ಬೃಹತ್ ರೋಡ್ ಶೋನಲ್ಲಿ ಶಾ ಪಾಲ್ಗೊಂಡರು. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿತು. ಕಣ್ಣು ಹಾಯಿಸಿದ ಕಡೆಗೆಲ್ಲಾ ಬಿಜೆಪಿ - ಜೆಡಿಎಸ್ ಬಾವುಟ ಹಿಡಿದ ಕಾರ್ಯಕರ್ತರು, ಅಭಿಮಾನಿಗಳು ಕಂಡು ಬಂದರು. ಇಡೀ ರಸ್ತೆ ಕೇಸರಿ ಬಾವುಟಗಳಿಂದ ರಾರಾಜಿಸುತ್ತಿತ್ತು.

ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ್ ಪೂಜಾರ್, ಮಾಜಿ ಸಚಿವ ಬಿ.ಸಿ. ಪಾಟೀಲ ಮತ್ತು ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.