ಬೆಂಗಳೂರು: 'ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಬೇಕು' ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನಿಲ್ಕುಮಾರ್ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಕರ್ನಾಟಕದ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಪಕ್ಷದ ನಾಯಕರ ಆಶೀರ್ವಾದ ಇಲ್ಲದೇ ಇಂತಹ ಹೇಳಿಕೆಗಳನ್ನು ನೀಡಲು ಸಾಧ್ಯವೇ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ರಾಜ್ಯವನ್ನು ಒಡೆಯುವುದು ಕಾಂಗ್ರೆಸ್ ಪಕ್ಷದ ರಹಸ್ಯ ಕಾರ್ಯಸೂಚಿಯೇ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು. ವಿಚಿತ್ರವೆಂದರೆ ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಲೂ ಮುಖ್ಯಮಂತ್ರಿ ಇದೇ ರೀತಿ ಮೌನ ವಹಿಸಿದ್ದರು ಎಂದು ಸುನಿಲ್ಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.