ಸುಳ್ಯ (ದಕ್ಷಿಣ ಕನ್ನಡ) : ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಕಾರಣ ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಮಂಗಳವಾರ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷ ಟಿಕೆಟ್ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ’ ಎಂದರು.

‘ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು’ ಎಂದು ಹೇಳಿದರು.‘

‘ನಾನು ಇನ್ನು ರಾಜಕಾರಣದಲ್ಲಿ ಇರಲ್ಲ. ಚುನಾವಣಾ ಪ್ರಚಾರವನ್ನೂ ಮಾಡುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು’ ಎಂದು ಹೇಳಿದರು.

ಇವನ್ನೂ ಓದಿ...

* ಮಗಳು ರಾಜನಂದಿನಿ ನಡೆ ಎದೆಗೆ ಚೂರಿ ಹಾಕಿದಂತಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

* ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು, ಈ ರೀತಿಯಲ್ಲ: ಶೆಟ್ಟರ್ ಬೇಸರ

* ಶೆಟ್ಟರ್ಗೆ ಟಿಕೆಟ್ ಸಾಧ್ಯತೆ, ಬಿಜೆಪಿ 2ನೇ ಪಟ್ಟಿ ಇಂದು ಬಿಡುಗಡೆ: ಯಡಿಯೂರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.