ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷದಿಂದ ನೂತನ ಸಿಎಂ ಆಯ್ಕೆಗೆ ಸಂಜೆ 5.30ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿಯಿಂದ ಮೂವರು ವೀಕ್ಷಕರನ್ನು ನೇಮಕ ಮಾಡಲಾಗಿದೆ.

ಕಾಂಗ್ರೆಸ್ನ ಹಿರಿಯ ನಾಯಕ ಸುಶೀಲ್ ಕುಮಾರ್ ಶಿಂಧೆ, ಪ್ರಧಾನ ಕಾರ್ಯದರ್ಶಿ ಜಿತೇಂದರ್ ಸಿಂಗ್, ಎಐಸಿಸಿಯ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಾಬರಿಯಾ ಅವರನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯನ್ನು ಕೇಂದ್ರ ವೀಕ್ಷಕರು ನೋಡಿಕೊಳ್ಳುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.

‘ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕರ್ನಾಟಕದ ಸಿಎಲ್ಪಿ ನಾಯಕರ ಆಯ್ಕೆಗೆ ವೀಕ್ಷಕರಾಗಿ ಸುಶೀಲ್ಕುಮಾರ್ ಶಿಂಧೆ (ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರ), ಜಿತೇಂದ್ರ ಸಿಂಗ್ (ಎಐಸಿಸಿ ಪ್ರಧಾನ ಕಾರ್ಯದರ್ಶಿ) ಮತ್ತು ದೀಪಕ್ ಬಬಾರಿಯಾ (ಮಾಜಿ ಎಐಸಿಸಿ ಪ್ರಧಾನ ಕಾರ್ಯದರ್ಶಿ) ಅವರನ್ನು ನಿಯೋಜಿಸಿದ್ದಾರೆ’ಎಂದು ಅವರು ಟ್ವೀಟ್ ಮಾಡಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಿಎಂಗಾದಿ ರೇಸ್ನಲ್ಲಿದ್ದಾರೆ.

ಮೇ 10ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ(ಮೇ13) ಹೊರಬಿದ್ದಿದ್ದು, ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆದ್ದು ಪ್ರಚಂಡ ಬಹುಮತ ಗಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.