ಕಡೂರು: ‘ಕಾಂಗ್ರೆಸ್ ಟಿಕೆಟ್ ನೀಡದೆ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ, ಈ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಕಡೂರು ಕ್ಷೇತ್ರದ ಸ್ವಾಭಿಮಾನವನ್ನು ರಾಜ್ಯಕ್ಕೆ ತೋರಿಸುವ ಛಲ ತೊಟ್ಟಿದ್ದೇನೆ’ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಪ್ರಕಟಿಸಿದರು.

ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿತ್ತು. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ ಎಂಬುದಕ್ಕೆ ಪೂರಕವಾಗಿ 50 ವರ್ಷಗಳ ಜೆಡಿಎಸ್ ನಂಟು ಬಿಟ್ಟು ಕಾಂಗ್ರೆಸ್ ಸೇರಿದೆ. ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅದನ್ನು, ನನ್ನ ಅಭಿಮಾನಿಗಳು ಮತ್ತು ಪ್ರೀತಿಸುವ ಸಮುದಾಯಗಳು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿವೆ. ಆ ಸ್ವಾಭಿಮಾನ ಉಳಿಸಿಕೊಳ್ಳಲು ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ’ ಎಂದು ಹೇಳಿದರು.

‘ಪ್ರೀತಿಯಿಂದಲೇ ಜನರ ಬಳಿ ತೆರಳಿ ಹಣ ಸಹಾಯದ ಜೊತೆ ಮತ ಭಿಕ್ಷೆ ಬೇಡುತ್ತೇನೆ. ಸ್ವಾಭಿಮಾನ ಎಂದರೆ ಏನು ಎಂಬುದನ್ನ ನನ್ನ ಅಭಿಮಾನಿಗಳು ಇಡೀ ರಾಜ್ಯಕ್ಕೆ ತೋರಿಸುತ್ತಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ’ ಎಂದರು.

‘ಈಗ ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಮಾನದಂಡದ ಅವಲೋಕನ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ, ಅದನ್ನು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.