ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ, ಚಿಕ್ಕಬಳ್ಳಾಪುರದ ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ ಸೋಮವಾರ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಪಕ್ಷದ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುವೆ. ರಾಜಕಾರಣದಲ್ಲಿ ಸಕ್ರಿಯವಾಗಿರುವೆ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸ್ಪರ್ಧಿಸಿದ್ದ ವೀರಪ್ಪ ಮೊಯಿಲಿ ಅವರು ಎರಡು ಬಾರಿ ಗೆಲುವು ಸಾಧಿಸಿದ್ದರು. ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದರು.

ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ರಕ್ಷಾ ರಾಮಯ್ಯ ಅವರಿಗೆ ದೊರೆತ ನಂತರ ಕ್ಷೇತ್ರಕ್ಕೆ ಬಂದಿರಲಿಲ್ಲ. ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.