ಬೆಂಗಳೂರು: ‘ಪೆನ್‌ಡ್ರೈವ್ ವಿಷಯವು ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಎಲ್ಲರಿಗಿಂತ ಮೊದಲು ಗೊತ್ತಿತ್ತು. ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಶಿವಕುಮಾರ್ ಬಳಿ ಪೆನ್‌ಡ್ರೈವ್ ಇದ್ದಿದ್ದರೆ ಇನ್ನೂ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಿತ್ತಲ್ಲವೇ? ಪೆನ್ ಡ್ರೈವ್ ಹಾಸನ ಜಿಲ್ಲೆಯಲ್ಲಿ ಬಿಡುಗಡೆಯಾಗಿದ್ದು, ಅಲ್ಲಿಯ ನಾಯಕರ ಕೈವಾಡ ಅದರಲ್ಲಿದೆ. ಮೈತ್ರಿಕೂಟದ ನಾಯಕರು ಹಾಗೂ ಕುಮಾರಸ್ವಾಮಿ ಅವರ ಕೈವಾಡವಿದೆ. ವಿಡಿಯೊಗಳು ನಾಲ್ಕು ವರ್ಷ ಹಳೆಯದು ಎಂದು ರೇವಣ್ಣನವರೇ ಒಪ್ಪಿಕೊಂಡಿದ್ದಾರೆ. ಅವರ ಕುಟುಂಬದ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದ್ದು, ಬೇರೆಯವರ ಮೇಲೆ ಯಾಕೆ ಆರೋಪ ಮಾಡಬೇಕು’ ಎಂದು ಪ್ರಶ್ನಿಸಿದರು.

‘ಈ ಪ್ರಕರಣದಲ್ಲಿ ಕುಮಾರಸ್ವಾಮಿ ಅವರ ಆರೋಪ ಮುಖ್ಯವೋ? ಆ ಭಾಗದ ಐನೂರಕ್ಕಿಂತ ಹೆಚ್ಚು ಸಂತ್ರಸ್ತೆಯರಿಗೆ ರಕ್ಷಣೆ, ನ್ಯಾಯ ಒದಗಿಸುವುದು ಮುಖ್ಯವೋ? ಅವರು ತಮ್ಮ ಹುಳುಕು ಮುಚ್ಚಿಕೊಳ್ಳಲು ದಿನಾ ಒಂದೊಂದು ಹೇಳಿಕೆ ನೀಡುತ್ತಲೇ ಇರುತ್ತಾರೆ’ ಎಂದು ಕುಟುಕಿದರು.

ಜನವರಿ 27 ರಂದು ಸೂರಜ್ ರೇವಣ್ಣ ಅವರು ಈ ವಿಚಾರಕ್ಕೆ ಭೇಟಿಯಾಗಿದ್ದರಂತೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಸುರೇಶ್, ‘ಈ ರೀತಿಯ ಚರ್ಚೆಯೇ ತಪ್ಪು. ಬೇರೆ ಕೆಲಸದ ವಿಷಯವಾಗಿ ಸೂರಜ್ ರೇವಣ್ಣ ಶಿವಕುಮಾರ್ ಅವರನ್ನು ಭೇಟಿ ಮಾಡಿರಬಹುದು’ ಎಂದರು.

ದೂರು ಕೊಟ್ಟರೆ ಶಾಸಕರ ವಿರುದ್ಧವೂ ಕ್ರಮ: ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಸಂಬಂಧಿಸಿದ ವಿಡಿಯೊ ಬಿಡುಗಡೆಯಾಗಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ‘ಮಾಡಲಿ ಸಂತೋಷ. ಸಂತ್ರಸ್ತೆ ದೂರು ನೀಡಿದರೆ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ’ ಎಂದು ಸುರೇಶ್ ಹೇಳಿದರು.

ನಿಮ್ಮ ಆಪ್ತರು ಎಂದು ವಿಡಿಯೊ ಹಂಚುತ್ತಿದ್ದಾರೆಯೇ ಎಂದು ಪ್ರಶ್ನಿಸಿದಾಗ, ‘ಅಂತಹ ನೂರೆಂಟು ಇವೆ. ಬಾಂಬೆ ಬ್ಲೂ ಬಾಯ್ಸ್‌ಗಳದ್ದು ಆಯ್ತು. ಸಿ.ಪಿ. ಯೋಗೀಶ್ವರ್ ಅವರು ಎಲ್ಲ ಮಠಗಳ ಪ್ರವಾಸ ಮಾಡಿದ್ದು ಆಯ್ತು. ಮಠದವರು ಅವರ ಬಳಿ ಖಾಸಗಿಯಾಗಿ ಆ ಬಗ್ಗೆ ಮಾತಾಡಿರಬೇಕಲ್ಲವೇ? ಅಮಿತ್ ಶಾ ಬಳಿ ಹೋಗಿ ಕೊಟ್ಟಿದ್ದಾಯ್ತು. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರು ಬದಲಾವಣೆಯಾಗಲು ಕಾರಣವೇನು? ಅದನ್ನು ಯೋಗೀಶ್ವರ್ ಅವರೇ ಹೇಳಿದ್ದಾರೆ. ಹೀಗೆ, ಒಬ್ಬೊಬ್ಬರದ್ದು ಒಂದೊಂದು ಇರುತ್ತದೆ’ ಎಂದರು.
.ಸಿಎಂ ಅಧಿಕಾರ ಬಿಟ್ಟುಕೊಟ್ಟರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ: ಆರ್.ಅಶೋಕ.ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್.ಎಸ್ಐಟಿ ತನಿಖೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ.ಪ್ರಜ್ವಲ್ರನ್ನು ಸ್ವದೇಶಕ್ಕೆ ಕರೆತರಲು ನೆರವಾಗುವಂತೆ PMಗೆ ಸಿದ್ದರಾಮಯ್ಯ ಪತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.