ಹುಬ್ಬಳ್ಳಿ: ಜನರ ತೀರ್ಮಾನವನ್ನು ಗೌರವಿಸುತ್ತೇನೆ. ನನ್ನನ್ನು ಸೋಲಿಸಬೇಕೆಂದು ಹಲವರು ಹಟ ತೊಟ್ಟಿದ್ದರು. ಅವರ ಆಸೆ ಈಡೇರಿದೆ. ಅವರು ನನ್ನನ್ನು ಸೋಲಿಸುವ ಜತೆಗೆ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ ಎಂದು ಜಗದೀಶ ಶೆಟ್ಟರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೊಡದೆ ಇದ್ದುದನ್ನು ಸವಾಲಾಗಿ ಸ್ವೀಕರಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಸೋತಿದ್ದಕ್ಕೆ ದುಃಖ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ನನಗೆ ಪೆಟ್ಟು ಕೊಡಲು ಹೋಗಿ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರೆ ಎಂದರು.

ನನ್ನನ್ನು ಸೋಲಿಸಲು ಷಡ್ಯಂತ್ರ ಮಾಡಿದ್ದರಿಂದ ಬಿಜೆಪಿ ಅವಸಾನದ ಅಂಚಿಗೆ ಬಂದಿದೆ. ನಾನು ಸಿಂದಗಿ, ಮುದ್ದೇಬಿಹಾಳ, ಕೊಪ್ಪಳ, ಹಾವೇರಿ ಸೇರಿದಂತೆ ಹಲವು ಕಡೆ ಪ್ರವಾಸ ಮಾಡಿದ್ದೆ. ಅಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.

ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದ್ದರ ಪರಿಣಾಮ ಮುಂಬೈ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಇಡೀ ರಾಜ್ಯದಲ್ಲಿ ಆಗಿದೆ ಎಂದರು.

70 ವರ್ಷದ ನಂತರ ಚುನಾವಣಾ ರಾಜಕಾರಣದಲ್ಲಿ ಇರುವುದಿಲ್ಲ ಎಂದು ಹೇಳಿದ್ದೇನೆ. ಈಗ ನನಗೆ 67 ವರ್ಷ. ಮುಂದಿನ ದಿನಗಳಲ್ಲಿ ಏನು ಆಗುತ್ತದೆ ನೋಡೊಣ. ಚುನಾವಣಾ ರಾಜಕಾರಣದಲ್ಲಿ ಇರದಿದ್ದರೂ ಇನ್ನೂ ಹತ್ತು ವರ್ಷ ಕ್ರಿಯಾಶೀಲವಾಗಿ ರಾಜಕಾರಣದಲ್ಲಿ ಇರುತ್ತೇನೆ. ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು.

ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ, ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಇದ್ದರೂ ಇಂದು ಬಿಜೆಪಿಗೆ ಕಡಿಮೆ ಸೀಟುಗಳು ಬಂದಿವೆ. ಇದು ಬಿಜೆಪಿ ಅವಸಾನ ಆಗುತ್ತಿರುವುದಕ್ಕೆ ಸಾಕ್ಷಿ. ಜಗದೀಶ ಶೆಟ್ಟರ್ ಅವರನ್ನು ಸೋಲಿಸಬೇಕು ಎಂಬ ಕಾರಣಕ್ಕೆ ದಕ್ಷಿಣ ಭಾರತದಲ್ಲಿ ಅಸ್ತಿತ್ವಕ್ಕೆ ಕಳೆದುಕೊಂಡಿದ್ದಾರೆ ಎಂದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ಪಕ್ಷ ಒಡೆದು ಮೂರು ಹೋಳಾಗಿದ್ದರೂ ನಾನು 40 ಸೀಟುಗಳನ್ನು ಗೆದ್ದಿದ್ದೆ. ಈಗ 60 ಸೀಟು ಗೆಲ್ಲಲು ಗುದ್ದಾಡುತ್ತಿದ್ದಾರೆ ಎಂದು ಹೇಳಿದರು.

ನಾವೇ ಬಿಜೆಪಿಯನ್ನು ಬೆಳೆಸಿದ್ದೆವು. ಕ್ಷೇತ್ರದಲ್ಲಿ ಎಲ್ಲೋ ಒಂದು ಕಡೆ ಜನರ ಆ ಮನಸ್ಥಿತಿ ಬದಲಾಯಿಸಲು ಸಾಧ್ಯವಾಗಲಿಲ್ಲ. ಅದು ಸೋಲಿಗೆ ಕಾರಣ ಇರಬಹುದು. ಒಳ ಹೊಡೆತ ಹೊರ ಹೊಡೆತ ಇಲ್ಲಿ ಕೆಲಸ ಮಾಡಿಲ್ಲ. ಬೂತ್ ಮಟ್ಟದಲ್ಲಿ ಪರಿಶೀಲಿಸಿ ಸೋಲಿಗೆ ಕಾರಣ ಏನು ಎಂಬುದನ್ನು ಪತ್ತೆ ಮಾಡುತ್ತೇನೆ ಎಂದು ಹೇಳಿದರು.

ಗುಜರಾತ್ ಮಾದರಿ ಇಲ್ಲಿ ಕೆಲಸ ಮಾಡಿಲ್ಲ. ಲಿಂಗಾಯತರ ಪ್ರಬಾವ ಇರುವ ಕಡೆಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಸೋಮಣ್ಣ, ಮುರುಗೇಶ ನಿರಾಣಿ, ಶ್ರೀರಾಮುಲು, ಕಾರಜೋಳ ಅವರಂತ ಪ್ರಮುಖರು ಸೋತಿದ್ದಾರೆ. ಇದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು. ಇದರ ಪರಿಣಾಮ ಮುಂದಿನ ಲೋಕಸಭಾ ಚುನಾವಣೆ ಮೇಲೂ ಆಗಲಿದೆ ಎಂದರು.

ಲಿಂಗಾಯತರನ್ನು ಕಡೆಗಣಿಸಿದ್ದು, ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬೆಲೆ ಏರಿಕೆ ಸೇರಿ ಎಲ್ಲ ಕಾರಣಗಳಿಂದ ಬಿಜೆಪಿ ಸೋಲಿಗೆ ಕಾರಣ. ಲಿಂಗಾಯತರು ಕಾಂಗ್ರೆಸ್ ಪರವಾಗಿ ನಿಂತಿದ್ದಾರೆ ಎಂದು ಹೇಳಿದರು.

ಸೆಂಟ್ರಲ್ ಕ್ಷೇತ್ರದಲ್ಲಿ ನನ್ನನ್ನು ಟಾರ್ಗೆಟ್ ಮಾಡಿ ಹಣ, ಅಧಿಕಾರದ ಪ್ರಬಾವ ಬಳಸಿದರು. ಇಡಿ, ಐಟಿ ದಾಳಿಯ ಬೆದರಿಕೆ ಹಾಕಿ ಭಯದ ವಾತಾವರಣ ಸೃಷ್ಟಿಸಿ ಗೆದ್ದಿದ್ದಾರೆ. ನಾನು ಅಧಿಕಾರದಲ್ಲಿ ಇಲ್ಲದಿದ್ದರೂ ಈ ಭಾಗದ ಜನರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಬಿಜೆಪಿಯ ಅಂಹಕಾರ, ಅಧಿಕಾರದ ಮದಕ್ಕೆ ಉತ್ತರ ಕೊಟ್ಟಿದ್ದೇನೆ. ನನಗೆ ವೈಯಕ್ತಿಕವಾಗಿ ಸೋಲಾಗಿದೆ. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.