ಕೋಲಾರ: ‘ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ ಆಗುತ್ತದೆ. ಹೀಗಾಗಿ, ಕುರುಬ ಸಮುದಾಯದವರು ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು. ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಗೆಲ್ಲಿಸಲು ಸಹಾಯ ಮಾಡಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮನವಿ ಮಾಡಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಹಾಲಿಸ್ಟರ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿದರು.

‘ಲೋಕಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಿತ್ತೊಗೆಯುವುದಾಗಿ ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳುತ್ತಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.