ಮಂಡ್ಯ: ಮಂಗಳವಾರ ರಾತ್ರಿ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು ನಾಗಮಂಗಲ ಕ್ಷೇತ್ರಕ್ಕೆ ಆಶ್ಚರ್ಯಕರ ಅಭ್ಯರ್ಥಿ ಹೆಸರು ಪ್ರಕಟಿಸಲಾಗಿದೆ. ಮಾಜಿ ಶಾಸಕ, ಸಂಸದ ಎಲ್.ಆರ್.ಶಿವರಾಮೇಗೌಡ ಅವರ ಪತ್ನಿ ಸುಧಾ ಶಿವರಾಮೇಗೌಡ ಅವರ ಹೆಸರು ಘೋಷಣೆ ಮಾಡಲಾಗಿದೆ. ಉಳಿದಂತೆ ಬೇರೆ ಕ್ಷೇತ್ರಗಳಿಗೆ ನಿರೀಕ್ಷಿತ ಹೆಸರುಗಳನ್ನೇ ಪ್ರಕಟಿಸಲಾಗಿದೆ.

ಕಳೆದ ವಾರವಷ್ಟೇ ಎಲ್.ಶಿವರಾಮೇಗೌಡ ಹಾಗೂ ಅವರ ಪುತ್ರ ಚೇತನ್ ಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಎಲ್.ಆರ್.ಶಿವರಾಮೇಗೌಡ ಅವರೇ ಕಣಕ್ಕೆ ಇಳಿಯುತ್ತಾರೆ ಎಂಬು ಬಿಂಬಿತವಾಗಿತ್ತು. ಆದರೆ, ಶಿವರಾಮೇಗೌಡ ಹಾಗೂ ಅವರ ಕುಟುಂಬ ಸದಸ್ಯರ ಮನವಿ ಮೇರೆಗೆ ಸುಧಾ ಶಿವಾರಾಮೇಗೌಡರನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ನಿರೀಕ್ಷೆಯಂತೆ ಕೆ.ಆರ್.ಪೇಟೆ ಕ್ಷೇತ್ರದಿಂದ ಸಚಿವ ಕೆ.ಸಿ.ನಾರಾಯಣಗೌಡ ಕಣಕ್ಕಿಳಿಯುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದ ಅಶೋಕ್ ಜಯರಾಂ ಅವರಿಗೆ ಟಕೆಟ್ ಘೋಷಣೆ ಮಾಡಲಾಗಿದೆ. ಮೇಲುಕೋಟೆ ಕ್ಷೇತ್ರದಿಂದ ಡಾ.ಇಂದ್ರೇಶ್, ಶ್ರೀರಂಗಪಟ್ಟಣ ಕ್ಷೇತ್ರದಿಂದ ಎಸ್.ಸಚ್ಚಿದಾನಂದ, ಮದ್ದೂರು ಕ್ಷೇತ್ರದಿಂದ ಎಸ್.ಪಿ.ಸ್ವಾಮಿ, ಮಳವಳ್ಳಿ ಕ್ಷೇತ್ರದಿಂದ ಮುನಿರಾಜು ಅವರ ಹೆಸರು ಘೋಷಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.