ಶಹಾಪುರ (ಯಾದಗಿರಿ ಜಿಲ್ಲೆ) : ಮುಸ್ಲಿಂ ಸಮುದಾಯಕ್ಕೆ ನೀಡಿದ ಶೇಕಡ ನಾಲ್ಕರಷ್ಟು ಮೀಸಲಾತಿಯನ್ನು ಬಿಜೆಪಿ ಸರ್ಕಾರ ಕಿತ್ತುಕೊಂಡು ಬೇರೆಯವರಿಗೆ ಹಂಚಿದೆ. ಇದರ ಹಕ್ಕು ಅವರಿಗಿಲ್ಲ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅಕ್ರೋಶ ವ್ಯಕ್ತಪಡಿಸಿದರು.

ನಗರದ ಅಂಜುಮನ್ ಆವರಣದಲ್ಲಿ ಸೋಮವಾರ ಹಮ್ಮಿಕೊಂಡ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಬಸಪ್ಪಗೌಡ ದರ್ಶನಾಪುರ ಪರ ಮತಯಾಚನೆ ಮಾಡಿ ಮಾತನಾಡಿದರು.

ಅನ್ಯ ಸಮುದಾಯಕ್ಕೆ ಮೀಸಲಾತಿ ಹಂಚಿಕೆ ಮಾಡಲು ನಮ್ಮ ವಿರೋಧವಿಲ್ಲ. ಆದರೆ ನಮ್ಮ ಪಾಲಿನ ಮೀಸಲಾತಿ ಕಸಿದುಕೊಂಡು ಮತ್ತೊಬ್ಬರಿಗೆ ನೀಡುವ ಅಧಿಕಾರ ನಿಮಗೆ ಯಾರು ಕೊಟ್ಟರು ಎಂದು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದರು. ಈಗಾಗಲೇ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಮಂಗಳಾರತಿ ಮಾಡಿದೆ. ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಸೂಚಿಸಿದೆ. ಹೀಗಾಗಿ ಸರ್ಕಾರ ಮೀಸಲಾತಿ ಕಸಿದುಕೊಳ್ಳುವ ಯತ್ನ ಮಾಡಬಾರದು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.