ಹಾಸನ: ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ, ಗೆಲ್ಲಿಸುವುದಾಗಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ನಿಜವಾಗಿದೆ.

ಮೂರು ಬಾರಿ ಶಾಸಕರಾಗಿದ್ದ ದಿವಂಗತ ಎಚ್.ಎಸ್. ಪ್ರಕಾಶ ಅವರ ಪುತ್ರ ಸ್ವರೂಪ್ ಸುಮಾರು 8 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಅನುಕಂಪ, ಆಡಳಿತ ವಿರೋಧಿ ಅಲೆ ಕ್ಷೇತ್ರದಲ್ಲಿ ಕೆಲಸ ಮಾಡಿದೆ.

ರೇವಣ್ಣ ಕುಟುಂಬದ ಯಾರೇ ಸ್ಪರ್ಧಿಸಿದರೂ, 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ಸವಾಲು ಹಾಕಿದ್ದ ಪ್ರೀತಂ ಗೌಡ ಸೋಲು ಅನುಭವಿಸಬೇಕಾಗಿದೆ. ಅತಿಯಾದ ಆತ್ಮವಿಶ್ವಾಸ, ಅನಗತ್ಯ ಹೇಳಿಕೆಗಳಿಂದ ಗೊಂದಲ ಸೃಷ್ಟಿಸಿಕೊಂಡ ಪ್ರೀತಂ ಗೌಡ ಅವರನ್ನು ಕ್ಷೇತ್ರದ ಮತದಾರರು ತಿರಸ್ಕರಿಸಿದ್ದಾರೆ.

ದಾಸ ಒಕ್ಕಲಿಗ ಸಮುದಾಯದ ಮತಗಳು ಬಿಜೆಪಿ, ಜೆಡಿಎಸ್‌ಗೆ ಹಂಚಿಕೆಯಾಗಿದ್ದು, ಅಲ್ಪಸಂಖ್ಯಾತರ ಮತಗಳು ಸಂಪೂರ್ಣವಾಗಿ ಜೆಡಿಎಸ್ ಪರ ಬಂದಿದ್ದರಿಂದ ಸ್ವರೂಪ್ ಗೆಲುವು ಸುಲಭವಾಯಿತು.

ಸ್ವರೂಪ್ ಗೆ ಟಿಕೆಟ್ ಕೊಡಲು ಆರಂಭದಲ್ಲಿ ಅಪಸ್ವರ ಎತ್ತಿದ್ದ ಎಚ್.ಡಿ.ರೇವಣ್ಣ ಕುಟುಂಬ ಸ್ವರೂಪ ಪರ ನಿಂತಿದ್ದು ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಭಾವನಾತ್ಮಕ ಪ್ರಚಾರಗಳು ಸ್ವರೂಪ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.