ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ರಕರ್ತರ ವಿರುದ್ಧ ಗೂಂಡಾಗಿರಿ ವರ್ತನೆ ತೋರಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ತಮ್ಮ ಸುದ್ದಿಗೋಷ್ಠಿಗೆ ಪತ್ರಕರ್ತಕರು ಬರಲಿಲ್ಲ ಎಂಬ ಕಾರಣಕ್ಕೆ ಅವರೆಲ್ಲರನ್ನೂ ಕೆಲಸದಿಂದ ತೆಗೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಅವರಿಗೆ ತಕ್ಷಣವೇ ನೋಟಿಸ್ ನೀಡಬೇಕು ಎಂದು ಮುಖ್ಯ ಚುನಾವಣಾಧಿಕಾರಿಯವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸಾಮಾಜಿಕ ಮಾಧ್ಯಮ ದುರ್ಬಳಕೆ ಮಾಡುತ್ತಿದೆ. ತೆಲಂಗಾಣದ ವಿಡಿಯೊವೊಂದನ್ನು ಬಳಸಿ, ರಾಜ್ಯದಲ್ಲಿ ಬಿಜೆಪಿಯ ಮಾಧ್ಯಮ ವಾಹನಕ್ಕೆ ಕಲ್ಲು ಹೊಡೆದಿದ್ದಾರೆ ಎಂದು ಬಿಂಬಿಸಿದ್ದಾರೆ. ಈ ಮೂಲಕ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಕೆಲಸ ಮಾಡಿದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.