ಹೊಸಪೇಟೆ (ವಿಜಯನಗರ): ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದ್ದು, ಮಂಗಳವಾರ ಐದು ಜನರೊಂದಿಗೆ ಮನೆ ಮನೆ ಪ್ರಚಾರ ಕೈಗೊಳ್ಳಲು ಅವಕಾಶವಿದೆ. ಆದರೆ, ಸಚಿವ ಆನಂದ್ ಸಿಂಗ್ ಅವರು ತಮ್ಮ ಮಗ, ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್ ಅವರೊಂದಿಗೆ 'ಗುಂಪು' ಕಟ್ಟಿಕೊಂಡು ಗ್ರಾಮೀಣ ಭಾಗಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ತಾಲ್ಲೂಕಿನ ಇಪ್ಪಿತ್ತೇರಿ ಮಾಗಾಣಿ, ಕಮಲಾಪುರ ಸೇರಿದಂತೆ ಇತರೆ ಹಳ್ಳಿಗಳಲ್ಲಿ ಮಗನನ್ನು ತಮ್ಮ ಸ್ಕೂಟಿಯ ಹಿಂಬದಿಯಲ್ಲಿ ಕೂರಿಸಿಕೊಂಡು ಎಲ್ಲೆಡೆ ಓಡಾಡಿ, ಮತದಾರರನ್ನು ಭೇಟಿಯಾಗುತ್ತಿದ್ದಾರೆ.

ಅವರೊಂದಿಗೆ ಅವರ ಅನೇಕ ಜನ ಬೆಂಬಲಿಗರು ಬೈಕ್ ನಲ್ಲಿ ಓಡಾಡುತ್ತಿದ್ದಾರೆ. ಅದರ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರ ನಡುವೆ ಚುನಾವಣೆ ಆಯೋಗದ ಸಿಬ್ಬಂದಿ ತಡೆಯುವ ಕೆಲಸ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

‘ವಿಷಯ ನನ್ನ ಗಮನಕ್ಕೆ ಬಂದಿದೆ. ನಮ್ಮ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ತಡೆಯಲಾಗಿದೆ. ಇಂದು ಬೈಕ್ ರ್ಯಾಲಿ ನಡೆಸುವಂತಿಲ್ಲ‘ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ‘ಪ್ರಜಾವಾಣಿ‘ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.